ನವಂಬರ್ 26 ರಂದು ಶಾಲಾ ಕಾಲೇಜುಗಳಲ್ಲಿ ತಪ್ಪದೇ ಕಾರ್ಯಕ್ರಮ ಮಾಡಲು ಸೂಚನೆ – ರಾಜ್ಯದ ಶಾಲಾ ಕಾಲೇಜುಗಳಿಗೆ ಖಡಕ್ ಸೂಚನೆ…..

Suddi Sante Desk
ನವಂಬರ್ 26 ರಂದು ಶಾಲಾ ಕಾಲೇಜುಗಳಲ್ಲಿ ತಪ್ಪದೇ ಕಾರ್ಯಕ್ರಮ ಮಾಡಲು ಸೂಚನೆ – ರಾಜ್ಯದ ಶಾಲಾ ಕಾಲೇಜುಗಳಿಗೆ ಖಡಕ್ ಸೂಚನೆ…..

ಬೆಂಗಳೂರು

ನವೆಂಬರ್- 26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡಾ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿ ಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರ ದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

ಮುಂದುವರೆದು,ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿ ಆದೇಶವನ್ನು ಮಾಡಲಾಗಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.