ಬೆಂಗಳೂರು –
ಕೋವಿಡ್ ಅಲೆಯ ನಡುವೆ ರಾಜ್ಯದಲ್ಲಿ ರದ್ದು ಮಾಡಲಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಬೆನ್ನಲ್ಲೇ ಈಗ ಸರ್ಕಾರ ವೃತ್ತಿಪರ ಕೋರ್ಸ್ ಗಳ ಸಿಇಟಿಗೆ ಮುಹೂರ್ತ ಫಿಕ್ಸ್ ಮಾಡಿದೆ ಆಗಸ್ಟ್ 28, 29ರಂದು ನಡೆಸಲು ನಿರ್ಧರಿಸಿದೆ.
ಈ ಕುರಿತಂತೆ ಇಂದು ಸಿಇಟಿ ವಿಚಾರವಾಗಿ ನಡೆದ ಸಭೆಯ ನಂತರ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು
ಈ ಸಭೆಯಲ್ಲಿ ವಿವಿಧ ಅಧಿಕಾರಿಗಳು ತಜ್ಞರು ಭಾಗವಹಿಸಿದ್ದರು.ಸಚಿವ ಸುರೇಶ್ ಕುಮಾರ್ ಸಲಹೆಯನ್ನು ನೀಡಿ,ದ್ವಿತೀಯ ಪಿಯು ಅಂಕಗಳನ್ನು ಈ ಬಾರಿ ಪರಿಗಣಿಸದಂತೆ ಮನವಿ ಮಾಡಿದ್ದರು.
ಸಿಇಟಿ ಆಧಾರದ ಮೇಲೆ RANK ನೀಡುವ ಕಾರ್ಯ ನಡೆಯಬೇಕು ಎಂಬುದಾಗಿ ತಿಳಿಸಿದ್ದರು.ಈ ವಿಚಾರ ವಾಗಿ ವಿಸೃತವಾಗಿ ಚರ್ಚೆ ಮಾಡಿ ಸಂಬಂಧ ಪಟ್ಟ ಎಲ್ಲಾ ಕೌನ್ಸಿಲ್ ಗಳಿಗೆ ಪತ್ರವನ್ನು ಬರೆದು, ಈ ಬಗ್ಗೆ ರಿಲ್ಯಾಕ್ಸೇಷನ್ ಕೊಡುವಂತೆ ಕೋರಲಾಗುತ್ತದೆ ಎಂದರು.
ಈ ಬಾರಿಯ ಸಿಇಟಿ ಪರೀಕ್ಷೆಯನ್ನು ಆಗಸ್ಟ್ 28, 29ರಂದು ನಡೆಸಲಾಗುತ್ತದೆ. ಮೊದಲ ದಿನ ಮ್ಯಾಥಮೇಟಿಕ್ಸ್ ಹಾಗೂ ಬಯೋಲಜಿ ಪರೀಕ್ಷೆ ನಡೆಯಲಿದೆ. ಎರಡನೇ ದಿನ ಫಿಜಿಕ್ಸ್ ಮತ್ತು ಕೆಮಿಸ್ಟ್ರಿ ಪರೀಕ್ಷೆ ನಡೆಯಲಿದೆ. ಮೂರನೇ ದಿನ ಗಡಿನಾಡಿನ ಕನ್ನಡಿಗರಿಗೆ ಪ್ರತ್ಯೇಕವಾಗಿ ಕನ್ನಡ ಪರೀಕ್ಷೆ ನಡೆಯಲಿದೆ. ಜೂನ್.15ರಿಂದ ಸಿಇಟಿ ಪರೀಕ್ಷೆ ಪರೀಕ್ಷೆಗೆ ನೊಂದಣಿ ಆರಂಭವಾಗಲಿದೆ ಎಂದರು.
ಸಿಇಟಿ ನಲ್ಲಿ ನೀಟ್ ತರ ಸಾಮಾನ್ಯ ಮಾರ್ಕ್ಸ್ ಪರಿಗ ಣಿಸೋ ಬಗ್ಗೆಯೂ ಚರ್ಚೆ ನಡೆಸಲಾಯಿತು.ಅಂಕಿ ಅಂಶಗಳನ್ನು ನೋಡಿ ಯಾವುದು ಸೂಕ್ತ ಎನ್ನುವ ಬಗ್ಗೆ ಇದೆ.ಈ ದಿಕ್ಕಿನಲ್ಲಿ ಕೂಡ ಚರ್ಚೆ ನಡೆಸಲಾಗು ತ್ತಿದೆ ಎಂಬುದಾಗಿ ಸಚಿವರು ತಿಳಿಸಿದರು.