This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಧಾರವಾಡ

36ನೇ ಘಟಿಕೋತ್ಸವಕ್ಕೆ ಸಿದ್ದಗೊಂಡ ಧಾರವಾಡದ ಕೃಷಿ ವಿಶ್ವವಿದ್ಯಾಲಯ – ಜೂನ್ 12 ರಂದು ನಡೆಯಲಿದೆ ಅರ್ಥಪೂರ್ಣ ಕಾರ್ಯಕ್ರಮ…..

WhatsApp Group Join Now
Telegram Group Join Now

ಧಾರವಾಡ

ಜೂ.12 ರಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ 36ನೇ ಘಟಕೋತ್ಸವ ಕಾರ್ಯಕ್ರಮಕ್ಕೆ ನಡೆಯುತ್ತಿದೆ ಅಂತಿಮ ಸಿದ್ದತೆ ಹೌದು ಧಾರವಾಡ ಕೃಷಿ ವಿಶ್ವವಿದ್ಯಾಲಯದ 36ನೇ ಘಟಕೋತ್ಸವವು ಜೂನ್ 12, 2023 ರಂದು ಬೆಳಗ್ಗೆ 11 ಗಂಟೆಗೆ ಕೃಷಿ ವಿಶ್ವವಿದ್ಯಾಲ ಯದ ಮುಖ್ಯ ಆವರಣದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಜರುಗಲಿದೆ.

ಕರ್ನಾಟಕ ರಾಜ್ಯದ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ,ಪದವಿ ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ

ಭಾರತ ಸರ್ಕಾರ ಶಿಕ್ಷಣ ವಿಭಾಗ ಹಾಗೂ ನವದೆಹಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ ಮಹಾನಿರ್ದೇಶಕ ಹಾಗೂ ಕೃಷಿ ಸಂಶೋಧನೆಯ ಕಾರ್ಯದರ್ಶಿ ಡಾ. ಹಿಮಾಂಶು ಪಾಠಕ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.

ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಉಪಸ್ಥಿತರಿರುವರು.ಘಟಿಕೋತ್ಸವದಲ್ಲಿ ಕುಲಪತಿಗಳಾದ ಡಾ. ಪಿ.ಎಲ್.ಪಾಟೀಲ ಅವರು ವಿಶ್ವವಿದ್ಯಾಲಯದ ಕಾರ್ಯಚಟುವಟಿಕೆ ಕುರಿತು ವರದಿ ಮಂಡಿಸುವರು.

ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಹಾಗೂ ವಿದ್ಯಾ ವಿಷಯಕ ಪರಿಷತ್ತಿನ ಸದಸ್ಯರು, ಪದವಿ ಪುರಸ್ಕೃತರ,ವಿದ್ಯಾರ್ಥಿಗಳು ಪಾಲ್ಗೋಳ್ಳು ವರು ಎಂದು ಕೃವಿವಿ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk