ಬೆಂಗಳೂರು –
ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಬಿಸಿಯೂಟ ವನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಹೌದು 2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಘೋಷಣೆ ಮಾಡಿರುವ ಬರಪೀಡಿತ ತಾಲ್ಲೂಕು ಗಳಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಿನ ಬೇಸಿಗೆ ರಜೆಯಲ್ಲಿ 1ರಿಂದ8 ನೇತರಗತಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ವಿತರಿಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.
ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳಲ್ಲಿ 223 ಬರಪೀಡಿತ ತಾಲ್ಲೂಕುಗಳೆಂದು ರಾಜ್ಯ ಸರ್ಕಾರವು ಘೋಷಿಸಿದೆ. ಏ.11ರಿಂದ ಮೇ 28ರ ವರೆಗೆ ಒಟ್ಟು 41 ದಿನಗಳ ಕಾಲ ಬೇಸಿಗೆ ರಜೆ ಇರುವುದರಿಂದ ಈ ಅವಧಿಯಲ್ಲಿ ಮಧ್ಯಾಹ್ನದ ಉಪಾಹಾರ ಕಾರ್ಯಕ್ರಮವನ್ನು ಶಾಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನ ಮಾಡುವಂತೆ ಶಾಲಾ ಶಿಕ್ಷಣ ಆಯುಕ್ತರು ಸೂಚಿಸಿದ್ದಾರೆ.
ಕೇಂದ್ರ ಸರ್ಕಾರದ ಪಿಎಂ ಪೋಷಣ್ ವಿಭಾಗ ದಿಂದ ಬಿಸಿಯೂಟಕ್ಕಾಗಿ ಶೇ.60:40ರ ಅನುಪಾ ತದಲ್ಲಿ ಒಟ್ಟು 88.40 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರ ಸರ್ಕಾರದ 55.82 ಕೋಟಿ ರೂ. ಮತ್ತು ರಾಜ್ಯದ 32.58 ಕೋಟಿ ರೂ.ಗಳನ್ನು ನಿಗದಿಮಾಡಲಾಗಿದೆ.
ಸುಪ್ರೀಂಕೋರ್ಟ್ ಆದೇಶದಂತೆ ಬರಗಾಲ ಪೀಡಿತ ಪ್ರದೇಶದಲ್ಲಿ ಬೇಸಿಗೆ ರಜೆಯಲ್ಲಿಯೂ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ಮಕ್ಕಳಿಗೆ ಬಿಸಿಯೂಟ ನೀಡಬೇ ಕೆಂಬ ಆದೇಶವಿದೆ. ಇದನ್ನು ಎಲ್ಲಾ ಶಾಲೆಗಳು ಪಾಲನೆ ಮಾಡಬೇಕೆಂದು ಸೂಚಿಸಲಾಗಿದೆ
ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ಬಿಸಿಯೂಟ ವಿತರಿಸುವ ಅಡುಗೆ ಕೇಂದ್ರಗಳನ್ನು ಗುರುತಿಸು ವುದು, ಕೇಂದ್ರವನ್ನು ಅಂತಿಮಗೊಳಿಸುವುದು ಸೇರಿ ಇನ್ನಿತರ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..