ತುಮಕೂರು –
ಚುನಾವಣೆಯ ಕರ್ತವ್ಯಕ್ಕೆ ನಿಯೋಜನೆ ಗೊಂಡಿದ್ದ ನೌಕರರೊಬ್ಬರು ಆತ್ಮಹತ್ಯೆ ಮಾಡಿ ಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ ಕುಣಿಗಲ್ ತಾಲೂಕಿನ ಹಳೆವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಚವಾಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ನೀರಗಂಟಿ ಚಂದ್ರ ಶೇಖರ(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮತಗಟ್ಟೆ ಎದುರಿನ ಓವರ್ ಹೆಡ್ ಟ್ಯಾಂಕ್ ಗೆ ನೇಣು ಹಾಕಿಕೊಂಡು ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಿಚವಾಡಿ ಮತಗಟ್ಟೆಗೆ ಅವರನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜಿ ಸಲಾಗಿತ್ತು.ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ಅವರನ್ನು ಗಮನಿಸಿದ ಕಾಂಗ್ರೆಸ್ ಕಾರ್ಯಕ ರ್ತರು ವಿಡಿಯೋ ಮಾಡಿಕೊಂಡು ಹಲ್ಲೆ ನಡೆಸಿ ದ್ದಾರೆ.
ಸರ್ಕಾರಿ ಕೆಲಸದಲ್ಲಿದ್ದು ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರೂ ಬಿಜೆಪಿ ಪರ ಮತ ಯಾಚಿಸುತ್ತಿರುವ ಬಗ್ಗೆ ಆಕ್ಷೇಪಿಸಿದ್ದಾರೆ. ಘಟನೆ ಯ ನಂತರ ಚಂದ್ರಶೇಖರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಮುಖಂಡರು ಹಲ್ಲೆ ನಡೆಸಿದ್ದರಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಆರೋಪಿಸಿದ್ದಾರೆ.
ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂತೆ ನ್ಯೂಸ್ ತುಮಕೂರು……