ಮಂಡ್ಯ –
ಮಕ್ಕಳೊಂದಿಗೆ ನೆಲದ ಮೇಲೆ ಕುಳಿತು ಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಊಟ ವನ್ನು ಮಾಡಿದ್ದಾರೆ ಹೌದು ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ದಿಢೀರ್ ಭೇಟಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಕಾರ್ಯಕ್ರಮ ನಿಮಿತ್ತ ಮಂಡ್ಯಗೆ ತೆರಳುತ್ತಿದ್ದ ಸಚಿವರನ್ನು ಮದ್ದೂರು ಶಾಸಕ ಕೆ.ಎಂ.ಉದಯ್ ಅವರ ಕೋರಿಕೆ ಮೇರೆಗೆ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಭೇಟಿ ನೀಡಿ ಕೊಠಡಿಗಳ ಅವ್ಯವಸ್ಥೆ ಹಾಗೂ ಸಮಸ್ಯೆ ಕುರಿತಂತೆ ಶಾಲಾ ಮಕ್ಕಳೊಂ ದಿಗೆ ಚರ್ಚಿಸಿದರು.
ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಸಚಿವರು ಶಾಲೆಯ ಸಮಸ್ಯೆಗಳ ಬಗ್ಗೆ ಅಹವಾಲು ಆಲಿಸಿದರು.ಬಳಿಕ ಮಕ್ಕಳೊಂದಿಗೆ ದಿನನಿತ್ಯ ನೀಡುವ ಬಿಸಿಯೂಟದ ಬಗ್ಗೆ ಮಾಹಿತಿ ಪಡೆದರು ಮತ್ತೆ ವಾರಕ್ಕೆರಡು ಬಾರಿ ಕಡ್ಡಾಯವಾಗಿ ಶಾಲೆ ಯಲ್ಲಿ ಊಟದ ಜೊತೆ ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡಲಾಗುತ್ತಿದೆ ಎಂಬ ಬಗ್ಗೆ ಸಚಿವರು ಮಕ್ಕಳಿಂದಲೇ ಮಾಹಿತಿ ಪಡೆದುಕೊಂಡರು.
ಬಳಿಕ ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿಗ ಳೊಂದಿಗೆ ನೆಲದ ಮೇಲೆ ಕುಳಿತು ಸಹಪಂಕ್ತಿ ಭೋಜನ ಮಾಡಿದರು. ಸಚಿವರ ಆಗಮನದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಊಟದ ಸೊಪ್ಪಿನ ಪಲ್ಯ,ಅಪ್ಪಳ, ಮೊಟ್ಟೆ,ಮುದ್ದೆ, ಅನ್ನ, ತರಕಾರಿ ಸಾಂಬಾರ್, ರಸಂ, ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು.
ಶಾಸಕರಾದ ಕೆ.ಎಂ.ಉದಯ್, ಮಂಡ್ಯ ಶಾಸಕ ಗಣಿಗ ರವಿ, ಅವರೊಂದಿಗೆ ಕೂಡಿ ಬೋಜನ ಸವಿದು ಮೆಚ್ಚುಗೆ ವ್ಯಕ್ತಪಡಿಸಿದರು. ವಿಧ್ಯಾರ್ಥಿ ಗಳು ಹಾಗೂ ಶಿಕ್ಷಕರೊಂದಿಗೆ ಛಾಯಾಚಿತ್ರ ತೆಗೆಸಿಕೊಂಡ ನಂತರ ನಿರ್ಗಮಿಸಿದರು.
ಸುದ್ದಿ ಸಂತೆ ನ್ಯೂಸ್ ಮಂಡ್ಯ…..