ಶಾಲೆ, ಕಾಲೇಜು ವಿದ್ಯಾರ್ಥಿನಿಯರಿಗೆ ಸೇರಿದಂತೆ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಭಾಗ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ CM ಹೌದು ರಾಜ್ಯದಲ್ಲಿನ ಶಾಲಾ,ಕಾಲೇಜು ವಿದ್ಯಾರ್ಥಿ ನಿಯರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಚಿತ ಬಸ್ ಭಾಗ್ಯ ವನ್ನು ಘೋಷಣೆ ಮಾಡಿದ್ದಾರೆ.ಅನುಕೂಲಕ್ಕಾಗಿರ
ಉಚಿತ ಬಸ್ ಪಾಸ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.ಹೊಸ ಯೋಜನೆಯಿಂದಾಗಿ ಇನ್ನು ಮುಂದೆ ವಿದ್ಯಾರ್ಥಿನಿಯರು ಶಾಲೆ, ಕಾಲೇಜು ಗಳಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು
ಇದೇ ಮೊದಲ ಬಾರಿಗೆ 3 ಲಕ್ಷ ಕೋಟಿ ಬಜೆಟ್ ಮಂಡನೆ ಮಾಡಿದ್ದಾರೆ.ಕಳೆದ ಬಾರಿ 2,65,720 ಕೋಟಿ ರೂಪಾಯಿ ಬಜೆಟ್ ಮಂಡನೆ ಮಾಡಿ ದ್ದರು.ಈ ಬಾರಿಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಇನ್ನೂ ಮುಂದೆ ಶಾಲಾ ಕಾಲೇಜು ವಿದ್ಯಾರ್ಥಿನಿ ಯರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸ ಬಹುದಾಗಿದೆ ಎಂದರು.
ವಿದ್ಯಾರ್ಥಿನಿಯರೂ ಮಾತ್ರವಲ್ಲದೇ ಮಹಿಳಾ ಕಾರ್ಮಿಕರಿಗೂ ಕೂಡ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಲಾಗಿದೆ.ಮಹಿಳಾ ಕಾರ್ಮಿಕರಿಗೂ ಕೂಡ ಉಚಿತ ಬಸ್ ಪಾಸ್ ಯೋಜನೆಯನ್ನು ಜಾರಿಗೆ ತರಲಾಗಿದೆ.ಅಲ್ಲದೇ ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆಯನ್ನು ಜಾರಿಗೆ ತಂದು,ಗೃಹಿಣಿಯರಿಗೆ ೫೦೦ ರೂಪಾಯಿ ಸಹಾಯಧನವನ್ನು ವಿತರಣೆ ಮಾಡಲಾಗುತ್ತಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..