ಬೆಂಗಳೂರು –
ಕೊರೋನಾ ಸಾಂಕ್ರಾಮಿಕ ರೋಗದ ಆತಂಕದ ನಡುವೆಯೇ ಜುಲೈ ಮೂರನೇ ವಾರದಲ್ಲಿ SSLC ಪರೀಕ್ಷೆ ಆರಂಭಿಸುವುದಾಗಿ ಹೇಳಿರುವ ಬೆನ್ನಲ್ಲೇ ಈಗ ರಾಜ್ಯ ಶಿಕ್ಷಣ ಇಲಾಖೆಯು ಪರೀಕ್ಷೆಗಾಗಿ ಭರ್ಜರಿಯಾದ ಸಿದ್ದತೆಯನ್ನು ಆರಂಭಿಸಿದೆ.ಹೌದು ನಿನ್ನೆಯಷ್ಟೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು SSLC ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ರಾಜ್ಯದ ಎಲ್ಲಾ 34 ಶೈಕ್ಷಣಿಕ ಜಿಲ್ಲೆಗಳ ಜಿಲ್ಲಾ ಉಪನಿರ್ದೇಶಕರು ಕ್ಷೇತ್ರ ಶಿಕ್ಷಣಾಧಿ ಕಾರಿಗಳು ಮತ್ತು ಇಲಾಖೆಯ ಹಿರಿಯ ಅಧಿಕಾರಿಗ ಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತುಕತೆ ನಡೆಸಿದರು.
ಈ ವೇಳೆ ಅಧಿಕಾರಿಗಳಿಗೆ ಪರೀಕ್ಷೆಯನ್ನು ಯಶಸ್ವಿ ಯಾಗಿ ನಡೆಸಲು,ವಿದ್ಯಾರ್ಥಿಗಳು ಹಾಗೂ ಪೋಷಕ ರ ವಿಶ್ವಾಸ ಗಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.ಅಲ್ಲದೇ ವಾರದೊ ಳಗೆ ಆಯಾ ಬಿಇಓ ಕಚೇರಿಗಳ ಮೂಲಕ ಮಾದರಿ ಪ್ರಶ್ನೆ ಪತ್ರಿಕೆಗಳು ಶಾಲೆಗಳಿಗೆ ತಲುಪಲಿವೆ.ಮಕ್ಕಳಿಗೆ ಓಎಂಆರ್ ಶೀಟ್ ರೂಪದಲ್ಲಿರುವ ಪ್ರಶ್ನೆ ಪತ್ರಿಕೆ ಗಳಿಗೆ ಹೇಗೆ ಉತ್ತರಿಸಬೇಕೆಂದು ಶಿಕ್ಷಕರು ಸಲಹೆ ನೀಡಬೇಕು ಎಂದರು.
ಪರೀಕ್ಷೆಯಲ್ಲಿ ಪ್ರತಿ ವಿಷಯಕ್ಕೆ 40 ಅಂಕದ ಪ್ರಶ್ನೆ ಗಳನ್ನು ಕೇಳಲಾಗುತ್ತದೆ.ಪ್ರತೀ ಪ್ರಶ್ನೆಗೂ ಪ್ರಶ್ನೆ ಪತ್ರಿಕೆಯಲ್ಲೇ ನಾಲ್ಕು ಉತ್ತರಗಳನ್ನು ನೀಡಲಾಗಿರು ತ್ತದೆ.ಅದರಲ್ಲಿ ಸರಿಯಾದ ಉತ್ತರ ಗುರುತು ಮಾಡ ಬೇಕು.ಪ್ರಶ್ನೆಗಳು ನೇರ ಮತ್ತು ಸುಲಭವಾಗಿರುವುದ ರಿಂದ ಮಕ್ಕಳಿಗೆ ಹೆಚ್ಚಿನ ಗೊಂದಲಗಳಾಗುವುದಿಲ್ಲ ಎಂದು ತಿಳಿಸಿದ್ದಾರೆ
ಮಕ್ಕಳ ಮುಂದಿನ ವ್ಯಾಸಾಂಗಕ್ಕೆ SSLC ಪರೀಕ್ಷೆ ದಿಕ್ಸೂಚಿಯಾಗಲಿರುವ ಕಾರಣ ಕೋವಿಡ್ ತಹಬ ದಿಗೆ ಬಂದ ಬಳಿಕವಷ್ಟೇ ಕೇವಲ ಎರಡು ದಿನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.ಈ ಬಾಗಿ ಬದಲಾಗಿರುವ ಪರೀಕ್ಷಾ ಪದ್ಧತಿ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ನಮ್ಮ ಅಧಿಕಾರಿ ಗಳು ಹಾಗೂ ಶಿಕ್ಷಕರು ಮಾಡಬೇಕು.ಸಾಧ್ಯವಾದರೆ ಶಾಲೆಗಳು ಆರಂಭಗೊಂಡ ಬಳಿಕ ನಿತ್ಯ ನಾಲ್ಕೈದು ಮಕ್ಕಳನ್ನು ಶಾಲೆಗೆ ಕರೆಸಿಕೊಂಡು ಆತ್ಮವಿಶ್ವಾಸ ತುಂಬಿ ಎಂದು ಸಲಹೆ ನೀಡಿದರು.
ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಕರು ಮಕ್ಕಳನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಿನ ಮುಂಜಾ ಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.ಪರೀಕ್ಷಾ ಕೊಠಡಿಗೆ ಬರುವ ಶಿಕ್ಷಕರಿಗೆ 2 ಡೋಸ್ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ.ಲಸಿಕೆ ಕುರಿತು ಈಗಾಗಲೇ ಆರೋಗ್ಯ ಇಲಾಖೆಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದಿದ್ದಾರೆ.