ಬೆಂಗಳೂರು –
ಡಯಟ್ ,ಸಿ.ಟಿ.ಇ ಮತ್ತು ಉಪನಿರ್ದೇಶಕರ ಕಚೇರಿಗಳಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಗಳಾಗಿ ಕಾರ್ಯ ನಿರ್ವಹಿ ಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಕರನ್ನು ಕರ್ತವ್ಯ ದಿಂದ ಬಿಡುಗಡೆಗೊಳಿಸುವಂತೆ ಸೂಚಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ ವಿಶಾಲ್ ಈ ಕುರಿತು ಆದೇಶ ಹೊರಡಿಸಿದ್ದು ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಯು ಯೋಜನೆ,ಕಾರ್ಯಕ್ರಮ ಸಂಯೋ ಜನೆ ಮತ್ತು ಸಾಂಖ್ಯಿಕ ಇಲಾಖೆಗೆ ಸಂಬಂಧಿಸಿದ ಹುದ್ದೆ ಗಳಾಗಿದ್ದು ಈ ಹುದ್ದೆಗಳಲ್ಲಿ ತಜ್ಞ ಸಿಬ್ಬಂದಿಗಳು ಕಾರ್ಯ ನಿರ್ವಹಿಸಬೇಕಾಗುತ್ತದೆ.
ಈ ಹುದ್ದೆಗಳಲ್ಲಿ ಬೋಧಕ ವೃಂದದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಕರು ಕಾರ್ಯನಿರ್ವಹಿಸುವುದು ಸಮಂಜಸವಲ್ಲ ಆದ್ದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅವರ ಸೇವೆ ಯನ್ನು ಹಿಂಪಡೆದು ಸದರಿ ಶಿಕ್ಷಕರು 10 ವರ್ಷ ‘ಸಿ’ ವಲಯದಲ್ಲಿ ಸೇವೆ ಸಲ್ಲಿಸದಿದ್ದಲ್ಲಿ ಕಡ್ಡಾಯವಾಗಿ ಸಿ ವಲಯಕ್ಕೆ ನಿಯುಕ್ತಿಗೊಳಿಸುವಂತೆ ಸೂಚನೆ ನೀಡಿದ್ದಾರೆ.