ಸರ್ಕಾರಿ ಶಾಲೆ ಜಾಗೆ ಕಬಳಿಕೆಗೆ ಯತ್ನ ಪ್ರತಿಭಟನೆ ಕಣ್ಮುಚ್ಚಿ ಕುಳಿತ ಇಲಾಖೆಯ ಅಧಿಕಾರಿಗಳು

Suddi Sante Desk
ಸರ್ಕಾರಿ ಶಾಲೆ ಜಾಗೆ ಕಬಳಿಕೆಗೆ ಯತ್ನ ಪ್ರತಿಭಟನೆ ಕಣ್ಮುಚ್ಚಿ ಕುಳಿತ ಇಲಾಖೆಯ ಅಧಿಕಾರಿಗಳು

ಬೆಂಗಳೂರು

 

ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿನ್ನಿಪೇಟೆ ವಾರ್ಡ್‌ನಲ್ಲಿರುವ ಬಿನ್ನಿ ಶಾಲೆಯನ್ನು ಕಬಳಿಸಲು ಕೆಲ ಪ್ರಭಾವಿಗಳು ಯತ್ನ ನಡೆಸಿದ್ದಾರೆ ಎಂದು ಇಎಪಿ ಪಕ್ಷ ಮತ್ತು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ.

 

ಶಾಲೆಯ ಮುಂದೆ ಸ್ಥಳೀಯರು ಜಮಾಯಿಸಿದ್ದು ಶಾಲೆಯ ಮುಂದೆ ಧರಣಿ ನಡೆಸುತ್ತಿದ್ದಾರೆ ಇನ್ನೂ ಸ್ಥಳೀಯರ ಭದ್ರತೆಗಾಗಿ ಪೊಲೀಸರು ಬಂದಿದ್ದು ಆರಂಭದಲ್ಲಿ ಈ ಬಿನ್ನಿಮಿಲ್ ಅಸೋಸಿಯೇಷನ್ ​​ಗೆ  ಮಹಾರಾಜರು ಮಕ್ಕಳ ಶಿಕ್ಷಣಕ್ಕಾಗಿ ದಾನ ನೀಡಿದ್ರು ಇದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

 

ಮೈಸೂರು ಅರಸರು 1902ರಲ್ಲಿ ಬಿನ್ನಿ ಮಿಲ್‌ ಕಾರ್ಖಾನೆಯ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆಂದು ಈ ನಿವೇಶನವನ್ನು ನೀಡಿದ್ದರು.ಸುಮಾರು 120 ವರ್ಷಗಳಿಂದ ಸರ್ಕಾರಿ ಶಾಲೆಗೆ ಬಳಕೆಯಾಗು ತ್ತಿರುವ ಈ ಐತಿಹಾಸಿಕ ನಿವೇಶನದ ಅತಿಕ್ರಮಕ್ಕೆ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದರು.

 

ಶಾಲೆಯ ನಿರ್ವಹಣೆಗಾಗಿ ಬಂದ ಇಟಿಎ ಸಂಸ್ಥೆ ಹಾಗೂ ಬಿನ್ನಿಪೇಟೆ ನಾಗರಿಕ ಹಿತರಕ್ಷಣಾ ಸಂಸ್ಥೆಯು ಪುನರ್‌ ನಿರ್ಮಾಣದ ನೆಪದಲ್ಲಿ ಶಾಲೆಯ ಕಟ್ಟಡವನ್ನು ಮುಂಭಾಗದಲ್ಲಿ ನಿರ್ಮಿಸಿ, ನಿವೇಶನದ ಹಿಂಭಾಗವನ್ನು ಅತಿಕ್ರಮಣ ಮಾಡುತ್ತಿದೆ ಬೆಂಗಳೂರಿನ ಹೃದಯಭಾಗದಲ್ಲಿ ರುವ ಈ ನಿವೇಶನವು ಸುಮಾರು 12,000 ಚದರ ಅಡಿಯಿದ್ದು ಕೋಟ್ಯಂತರ ರೂಪಾಯಿ ಬೆಲೆಯಿದೆ.

 

ಹೀಗೆ ಅತಿಕ್ರಮಣ ಮಾಡಿಕೊಂಡ ನಿವೇಶನವನ್ನು ಹಲವು ಸೈಟುಗಳಾಗಿ ಮಾಡಿ ಮಾರಾಟ ಮಾಡಲು ಅವೆರಡು ಸಂಸ್ಥೆಗಳ ಜೊತೆಗೆ ಬಿನ್ನಿ ಪೇಟೆಯ ಸ್ಥಳೀಯ ರಾಜಕೀಯ ಪುಡಾರಿಗಳು ಕೈಜೋಡಿಸಿದ್ದಾರೆ ಎಂದು ರಾಜಶೇಖರ್‌ ದೊಡ್ಡಣ್ಣ ಹೇಳಿದರು.

 

ಏಕಾಏಕಿ ಜೆಸಿಬಿ ತಂದು ಶಾಲೆಯ ಕಟ್ಟಡವನ್ನು ಧ್ವಂಸ ಮಾಡುತ್ತಿರುವ ವೇಳೆ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕೋಶ ವ್ಯಕ್ತಪಡಿಸಿದರು. ಅನೇಕ ಸ್ಥಳೀಯ ನಾಗರಿಕರು ಪ್ರತಿಭಟನೆಗೆ ಬೆಂಬಲ ನೀಡಿದರು.

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.