ಧಾರವಾಡ –
ಹೌದು ಆಗಸ್ಟ್ 17 ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಸ್ಥಾಯಿ ಸಮಿತಿ ಗಳಿಗೆ ಚುನಾವಣೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಯ ವಿವಿಧ ನಾಲ್ಕು ಸ್ಥಾಯಿ ಸಮಿತಿ ಗಳಿಗೆ ಸದಸ್ಯರನ್ನು ಚುನಾಯಿಸಲು ಆಗಸ್ಟ್ 17 ರಂದು ಚುನಾವಣೆ ಜರುಗಿಸಲಾಗುವುದು ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಎಸ್.ಬಿ. ಶೆಟ್ಟೆಣ್ಣವರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಆಗಸ್ಟ್ 17 ರಂದು ಮಧ್ಯಾಹ್ನ 1 ಗಂಟೆಗೆ ಧಾರವಾಡದ ಪಾಲಿಕೆಯ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಭಾಭವನದಲ್ಲಿ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಆಗಸ್ಟ್ 17 ರಂದು ಬೆಳಿಗ್ಗೆ 9 ಗಂಟೆಯಿಂದ 11 ರ ವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಮಪತ್ರ ಸ್ವೀಕರಿಸಲಾಗುವುದು ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭಿಸಿ ಚುನಾವಣಾ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಚುನಾವಣೆ ಅಧ್ಯಕ್ಷ ರಾಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..