ಧಾರವಾಡ –
ಧಾರವಾಡ ಗ್ರಾಮೀಣ ಉಪವಿಭಾಗ ವ್ಯಾಪ್ತಿ ಯಲ್ಲಿ ಬರುವ 110/11 ಕೆ.ವಿ ಶೇಡಬಾಳ ಖಾನಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆಗಸ್ಟ್ 18 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 2ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ
ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬ ರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ಆಗಸ್ಟ್ 18 ರಂದು ಬೆಳಿಗ್ಗೆ 10 ಘಂಟೆಯಿಂದ ಸಂಜೆ 5 ಘಂಟೆಯವರೆಗೆ ಗರಗ, ಹಂಗರಕಿ, ದುಬ್ಬದಮರಡಿ,ಅಗಸನಹಳ್ಳಿ, ಶೇಡಬಾಳ ಖಾನಾಪುರ, ತಡ್‍ಕೊಡ, ಮಾದನಭಾವಿ, ಮುಗಳಿ, ಹೋಸಟ್ಟಿ ಬೊಗುರ್, ಜಿರಗಿವಾಡ ಮತ್ತು ಕೊಟಬಾಗಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..