ದಾವಣಗೆರೆ –
ಧಾರವಾಡ ತಾಲೂಕಿನ ಇಟಿಗಟ್ಟಿ ಬಳಿ ಜನವರಿ 15 ರಂದು ಟಿಪ್ಪರ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತದಲ್ಲಿ ದಾವಣಗೆರೆ ಮೂಲದ 12 ಜನರು ಮೃತಪಟ್ಟಿದ್ದರು.

ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ ಕುಟುಂಬ ಸದಸ್ಯರು ಹಾಗೂ ಹುಬ್ಬಳ್ಳಿ-ಧಾರವಾಡ ನಾಗರಿಕರ ಸುರಕ್ಷತಾ ವೇದಿಕೆ ವತಿಯಿಂದ ಫೆಬ್ರವರಿ 6ರಂದು ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.

ಆಡಳಿತ ವರ್ಗದ ನಿರ್ಲಕ್ಷ್ಯದ ಬಗ್ಗೆ ಜಾಗೃತಿಯನ್ನು ಮೂಡಿಸಲು ಈ ಒಂದು ಪ್ರತಿಭಟನಾ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಫೆಬ್ರವರಿ 6ರಂದು ಬೆಳಗ್ಗೆ 7 ಗಂಟೆಗೆ ದಾವಣಗೆರೆ ನಗರದ ಐಎಂಎ ಹಾಲ್ ಆವರಣದಿಂದ ಅಪಘಾತ ಸ್ಥಳಕ್ಕೆ ಜಾಥ ಕೈಗೊಳ್ಳಲಾಗಿದೆ.

“ಅಪಘಾತ ನಡೆದ ಸ್ಥಳದಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರುವ ಕಾರ್ಯಕ್ರಮ ನಡೆಯಲಿದೆ. ನಂತರ ಸರ್ಕಾರದ ವೈಫಲ್ಯದ ವಿರುದ್ಧ ಹಾಗೂ ಇಂತಹ ದುರ್ಘಟನೆಗಳು ಮರುಕಳಿಸದಂತೆ ಅಲ್ಲಿನ ಪೊಲೀಸ್, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುತ್ತೆ ಘಟನೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳಲಾಗಿದೆ” ಎಂದು ನೊಂದ ಕುಟುಂಬದ ಡಾ. ರವಿಕುಮಾರ್ ಮಾಹಿತಿ ನೀಡಿದ್ದಾರೆ.

ಇನ್ನೂ ಕಳೆದ 25 ವರ್ಷದಿಂದಲೂ ಈ ರಸ್ತೆಯಲ್ಲಿ ಇಂತಹ ಅಪಘಾತಗಳು ಸಾಮಾನ್ಯವಾಗಿವೆ. ಎಲ್ಲಾ ಕಡೆ 6 ಪಥದ ರಾಷ್ಟ್ರೀಯ ಹೆದ್ದಾರಿಗಳಿದ್ದರೂ, ಈ ಭಾಗದಲ್ಲಿ ಮಾತ್ರ ಇನ್ನೂ 2 ಪಥದ ಹೆದ್ದಾರಿ ಇದೆ. ಈ ಸಮಸ್ಯೆ ಸರಿಪಡಿಸಬೇಕಾದ ಸರ್ಕಾರಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿವೆ. ಇದರಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ನಾಯಕರು ಅಪಘಾತದ ಬಗ್ಗೆ ಟ್ವೀಟ್ ಮಾಡಿದ್ದರು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದರು.ಇವೆಲ್ಲದರ ನಡುವೆ ಈಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಇನ್ನಾದರೂ ಎಚ್ಚೆತ್ತುಕೊಂಡು ಹೆದ್ದಾರಿ ಸುಧಾರಣೆಗೆ ಮುಂದಾಗಬೇಕು.
ಲ