ಬೆಂಗಳೂರು –
ನವಂಬರ್ 13 ರಂದು ರಾಜ್ಯ ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆ ಘೋಷಣೆ – ರಾಜ್ಯದ ಮೂರು ತಾಲ್ಲೂಕುಗಳಲ್ಲಿ ರಜೆ ಆದೇಶ
ನವಂಬರ್ 13 ರಂದು ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು ಈ ಒಂದು ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.ಹೌದು ಸಂಡೂರು, ಶಿಗ್ಗಾವಿ ಹಾಗೂ ಚನ್ನಪಟ್ಟಣ ವಿಧಾನಸಭಾ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳ ಸಿಬ್ಬಂದಿಗಳಿಗೆ ಮತದಾನ ದಲ್ಲಿ ಭಾಗಿಯಾಗಲು ಅನುಕೂಲವಾಗುವ ನಿಟ್ಟಿನಲ್ಲಿ ನವೆಂಬರ್ 13ರಂದು ವೇತನ ಸಹಿತ ರಜೆ ಘೋಷಿಸಿ ಆದೇಶ ವನ್ನು ಮಾಡಲಾಗಿದೆ.
ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು ದಿನಾಂಕ:13.11.2024 ರಂದು 83-ಶಿಗ್ಗಾಂವ್, 95-ಸಂಡೂರ್ ಮತ್ತು 185-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ.ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ ಶಾಲಾ ಕಾಲೇಜುಗಳಿಗೆ(ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳು, ಜೀವವಿಮಾ ನಿಗಮ, ಹಣಕಾಸು ಸಂಸ್ಥೆಗಳು ಹಾಗೂ ಇನ್ನಿತರ ಔಧ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ ಸೀಮಿತವಾದಂತೆ
ಹಾಗೂ ಮತದಾನ ಮಾಡಲು ಅನುಕೂಲವಾಗುವಂತೆ ಕಲಂ 25 ರಡಿ,ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪಬಂದಗಳನ್ವಯ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಲಾಗಿದೆ. ಒಂದು ದಿನದ ವೇತನ ಸಹಿತ ರಜೆಯನ್ನು ನೀಡಲು ಈ ಮೂಲಕ ಆದೇಶಿ ಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..