ಬೆಂಗಳೂರು –
ಪ್ರತಿ ಗ್ರಾಮಪಂಚಾಯ್ತಿಗಳಿಗೊಂದು ತಲಾ ಒಂದೊಂದು ಮಾದರಿ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು ಹಣಕಾಸಿನ ಲಭ್ಯತೆಯ ನಂತರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವಿಧಾನಸಭೆಗೆ ತಿಳಿಸಿದರು.ಶಾಸಕ ಶಿವಲಿಂಗೇಗೌ ಡರ ಪ್ರಶ್ನೆಗೆ ಉತ್ತರಿಸಿದ ಅವರು 2019-20 ರಲ್ಲಿ 276 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ. 2022-23ನೇ ಸಾಲಿನ ಆಯವ್ಯಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಮಟ್ಟವನ್ನು ಉತ್ತಮಪಡಿಸಲು ಹೋಬಳಿ ಮಟ್ಟದಲ್ಲಿ ಮೂಲಸೌಕರ್ಯ ಇರುವ ಶಾಲೆಗ ಳನ್ನು ಮಾದರಿ ಶಾಲೆಗಳನ್ನಾಗಿ ಉನ್ನತೀಕರಿಸಲು ಘೋಷಣೆ ಮಾಡಲಾಗಿದೆ ಎಂದರು.

ಇನ್ನೂ ಪ್ರತಿ ಗ್ರಾಮಪಂಚಾಯ್ತಿಗಳಿಗೆ ಒಂದೊಂದು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಬೇಕು ಎಂದು ಶಾಸಕರು ಬೇಡಿಕೆ ಇಟ್ಟಿದ್ದಾರೆ.ನಮಗೆ ಹೊಸ ಕಟ್ಟಡಗಳು, ಸಿಬ್ಬಂದಿ, ಮೂಲಭೂತ ಸೌಕರ್ಯ ಸೇರಿದಂತೆ ಹಲವು ರೀತಿಯ ಸೌಲಭ್ಯ ಬೇಕು. ಅನುದಾನದ ಲಭ್ಯತೆ ನೋಡಿ ಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಬೋಧನೆ ಮಾಡಲು ಇಂಗ್ಲಿಷ್ ಶಿಕ್ಷಕರ ಅಗತ್ಯವಿದೆ. ನೇಮಕಾತಿ ಮಾಡಿಕೊಳ್ಳಲು ಸಭೆ ಬೇಕಾಗುತ್ತದೆ ಎಂದು ಹೇಳಿದರು.
ಮಂಜುನಾಥ ಸರ್ವಿ ಸುದ್ದಿ ಸಂತೆ ನ್ಯೂಸ್ ಬೆಂಗಳೂರು





















