ಮೈಸೂರು –
ಭಾರತ ಚುನಾವಣಾ ಆಯೋಗವು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೊಂದಣಾ ಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗಳ ಒಳಪಡುವ ಕೊಡಗು, ಚಿಕ್ಕಮಗ ಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಮತ್ತು ದಾವಣಗೆರೆ ಜಿಲ್ಲೆಯ (ಹೊನ್ನಾಳಿ, ನ್ಯಾಮತಿ ಮತ್ತು ಚೆನ್ನಗಿರಿ ತಾಲೂಕುಗಳಲ್ಲಿ) ಜಿಲ್ಲಾಧಿಕಾರಿಗಳನ್ನು ಆಯುಕ್ತರು ಮಂಗಳೂರು ಶಿವಮೊಗ್ಗ ಮಹಾನಗರ ಪಾಲಿಕೆ ಮೈಸೂರು ವಿಭಾಗ ಹಾಗೂ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಆಯಾಯ ಉಪ ವಿಭಾಗಕ್ಕೆ ಸಂಬಂಧ. ಪಟ್ಟ ಎಲ್ಲಾ ಉಪ ವಿಭಾಗ ಅಧಿಕಾರಿಗಳು ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರನ್ನು ಸಹಾಯಕ ಮತದಾರರ ನೋಂದಣಾಧಿಕಾರಿಯನ್ನಾಗಿ ನೇಮಿಸಿರುತ್ತದೆ.
ಅರ್ಹತಾ ದಿನಾಂಕ 1-11-2023 ಕ್ಕೆ ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾ ಗಲೇ ಪ್ರಾರಂಭವಾಗಿದೆ.ಭಾರತ ಚುನಾವಣಾ ಆಯೋಗವು ಆಗಸ್ಟ್ 9 ರ ಪತ್ರದನ್ವಯ ಕರ್ನಾಟಕ ನೈರುತ್ಯ ಶಿಕ್ಷಕರ ಮತಕ್ಷೇತ್ರದ ಮತ ದಾರರ ಪಟ್ಟಿಯು ಹೊಸದಾಗಿ ಸಿದ್ಧಪಡಿಸಲಾ ಗುತ್ತಿರುವುದರಿಂದ ಈ ಇಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇ ಕಿದೆ ಎಂದು ನಿರ್ದೇಶನ ನೀಡಿರುತ್ತಾರೆ.
ಅರ್ಜಿ ನಮೂನೆ 19 ರಲ್ಲಿ ಅರ್ಜಿಯನ್ನು ಸ್ವೀಕರಿ ಸುವ ಕೊನೆಯ ದಿನಾಂಕ ಮತ್ತು ದಿನ ನವೆಂಬರ್ 6. ಕರಡು ಮತದಾರ ಪಟ್ಟಿ ಪ್ರಕಟಣೆ ನವೆಂಬರ್, 23 ಆಗಿರುತ್ತದೆ.ನವೆಂಬರ್, 23 ರಿಂದ ಡಿಸೆಂಬರ್ 9 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ದಿನಾಂಕವನ್ನು ನಿಗಧಿ ಮಾಡಲಾಗಿರುತ್ತದೆ.
ಡಿಸೆಂಬರ್ 30ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಯಾಗುತ್ತದೆ.ಕರ್ನಾಟಕ ನೈರುತ್ಯ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಈ ಮಾರ್ಗಸೂಚಿ ಅನುಸರಿಸಬೇಕಿದೆ.ಅರ್ಹತೆಗಳು: ಭಾರತದ ಪ್ರಜೆಯಾಗಿರುವ ಮತ್ತು ಈ ಮತಕ್ಷೇತ್ರದ ವ್ಯಾಪ್ತಿ ಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಮತ್ತು 1 ನೇ ನವೆಂಬರ್ 2023 ಕ್ಕೆ ಮೊದಲು ಆರು ವರ್ಷದ ಅವಧಿಯಲ್ಲಿ ಕನಿಷ್ಠ ಒಟ್ಟು ಮೂರು ವರ್ಷಗಳಷ್ಟು ದರ್ಜೆಯಲ್ಲಿ ಪ್ರೌಢಶಾಲಾ ಗಿಂತ ಕಡಿಮೆ ಇಲ್ಲದ ನಿರ್ದಿಷ್ಟ ಪಡಿಸಿದಂತಹ ರಾಜ್ಯ ದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿ ಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ.
ಯಾವುದೇ ವ್ಯಕ್ತಿಯು ನಮೂನೆ 19 ರಲ್ಲಿ ಅರ್ಜಿ ಯನ್ನು ಸಲ್ಲಿಸಿ ಶಿಕ್ಷಕರ ಕ್ಷೇತ್ರದಲ್ಲಿ ಮತದಾರರ ನ್ನಾಗಿ ನೋಂದಾಯಿಸಿಕೊಳ್ಳಲು ತನ್ನ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ತಾನು ಹಿಂದಿನ ಆರು ವರ್ಷಗಳಲ್ಲಿ ಒಟ್ಟು ಮೂರು ವರ್ಷಗಳು ಶಿಕ್ಷಕ ರಾಗಿ ಸೇವೆ ಸಲ್ಲಿಸಿರುವ ಕುರಿತು ಅರ್ಜಿಯೊಂದಿಗೆ ಪ್ರಮಾಣಪತ್ರವನ್ನು ಲಗತ್ತಿಸಿ ಸಲ್ಲಿಸತಕ್ಕದ್ದು. (ಪ್ರಮಾಣ ಪತ್ರದ ಮಾದರಿ ಮತ್ತು ನಮೂನೆ 19ನ್ನು ಮೇಲೆ ತಿಳಿಸಲಾದ ಕಚೇರಿಗಳಲ್ಲಿ ಪಡೆಯ ಬಹುದಾಗಿದೆ).
ಅರ್ಜಿಯನ್ನು ಸಲ್ಲಿಸುವ ದಿನಾಂಕದAದು ಯಾವುದೇ ವ್ಯಕ್ತಿಯು ಬೋಧನಾ ವೃತ್ತಿಯಲ್ಲಿ ನಿರತನಾಗಿರದಿದ್ದಲ್ಲಿ ಪ್ರಮಾಣ ಪತ್ರವನ್ನು ಅಂತಹ ವ್ಯಕ್ತಿಯು ಕೊನೆಯದಾಗಿ ಸೇವೆ ಸಲ್ಲಿಸಿದ ಸಂಸ್ಥೆಯ ಮುಖ್ಯಸ್ಥರಿಂದ ಸಹಿ ಮಾಡಿ ರತಕ್ಕದ್ದು.ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾಗಿ ಸಲ್ಲಿಸಿದ ಅರ್ಜಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಗಾಗಿ ಪರಿಗಣಿಸಲಾಗು ವುದಿಲ್ಲ ಆದರೆ ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯ ಎಲ್ಲಾ ಅರ್ಜಿಗಳನ್ನು ಒಟ್ಟಾರೆಯಾಗಿ ಕಳಿಸಬಹುದು.
ಒಂದೇ ಕುಟುಂಬದ ಇತರೆ ಸದಸ್ಯರ ನಮೂನೆ 19 ಅರ್ಜಿಗಳನ್ನು ಕುಟುಂಬದ ಒಬ್ಬ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬಂ ಧಿಸಿದ ಮೂಲ ಪ್ರಮಾಣ ಪತ್ರ ಒದಗಿಸಬೇಕು.
ಅರ್ಜಿಯಲ್ಲಿ ತಪ್ಪು ಅಥವಾ ತಪ್ಪೆಂದು ಅವನು ತಿಳಿದಿರುವ ಅಥವಾ ನಂಬುವಂತಹ ಅಥವಾ ಸತ್ಯವೆಂದು ನಂಬಲಾಗದಿರುವಂತಹ ಹೇಳಿಕೆ ಗಳನ್ನು ಅಥವಾ ಘೋಷಣೆಗಳನ್ನು ಮಾಡುವ ಯಾವುದೇ ವ್ಯಕ್ತಿಯನ್ನು ಪ್ರಜಾ ಪ್ರಾತಿನಿಧ್ಯ ಅಧಿನಿಯಮ 1950ರ 31 ನೇ ಪ್ರಕರಣದ ಮೇರೆಗೆ ಶಿಕ್ಷೆಗೆ ಗುರಿಪಡಿಸಲಾಗುವುದು.
ನಮೂನೆ 19 ರಲ್ಲಿ ಅರ್ಜಿಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿ ನಿಯೋಜಿತ ಅಧಿಕಾರಿಗಳವರ ಕಚೇರಿಯಿಂದ ಪಡೆಯಬ ಹುದು.ಕೈಬರಹದ ಬೆರಳಚ್ಚು ಮಾಡಿದ ಅಥವಾ ಖಾಸಗಿಯಾಗಿ ಮುದ್ರಿಸಿದ ನಮೂನೆಗಳನ್ನು ಕೂಡ ಅಂಗೀಕರಿಸಲಾಗುವುದು ನಮೂನೆ 19ರ ಅರ್ಜಿಗಳನ್ನು ಬಲ್ಕ (ಒಟ್ಟಿಗೆ) ಅರ್ಜಿ ಸ್ವೀಕರಿಸಲಾ ಗುವುದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ಸುದ್ದಿ ಸಂತೆ ನ್ಯೂಸ್ ಮೈಸೂರು…..