ಬೆಂಗಳೂರು –
ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾಯಮೂರ್ತಿ ದಿವಂಗತ ಮೋಹನ ಎಂ. ಶಾಂತನಗೌಡರ್ ಅವರಿಗೆ ನುಡಿ ನಮನ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಶನಿವಾರ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಈ ಒಂದು ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು
ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾ ಧೀಶ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಾಧೀಶರಾದ ನ್ಯಾಯಮೂರ್ತಿ ನಜೀರ್, ನ್ಯಾಯಮೂರ್ತಿ ಎ.ಎಸ್. ಬೋಪಣ್ಣ, ನ್ಯಾಯ ಮೂರ್ತಿ ಅಭಯ್ ಶ್ರೀನಿವಾಸ್ ಓಕಾ, ನ್ಯಾಯ ಮೂರ್ತಿ ಬಿ.ವಿ. ನಾಗರತ್ನ,ಕರ್ನಾಟಕ ಉಚ್ಛ ನ್ಯಾಯಾಲಯದ ಪ್ರಭಾರಿ ಮುಖ್ಯ ನ್ಯಾಯಾಧೀ ಶರಾದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.