ಚಿತ್ರದುರ್ಗ –
ಹೌದು ಕೇವಲ 4 ಸಾವಿರ ರೂಪಾಯಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ PDO ಮತ್ತು ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದವರಾಗಿ ದ್ದಾರೆ.
4 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿ ದ್ದಾರೆ.ಗ್ರಾಮ ಪಂಚಾಯತ್ ಪಿಡಿಒ ಶ್ರೀನಿವಾಸ್ ಹಾಗೂ ಕಂಪ್ಯೂಟರ್ ಆಪರೇಟರ್ ಚನ್ನಬಸಪ್ಪ ಬಂಧಿತರಾಗಿದ್ದಾರೆ.ಶಾಲಾ ಕಾಂಪೌಂಡ್ ಕಾಮ ಗಾರಿಗೆ 4 ಸಾವಿರ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಈ ಕುರಿತಂತೆ ಭೀಮಪ್ಪ ಎಂಬುವರು ಲೋಕಾಯುಕ್ತರಿಗೆ ದೂರನ್ನು ನೀಡಿದ್ದರು
ಹೀಗಾಗಿ ಇವರಿಂದ ಹಣವನ್ನು ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಡಿ ವೈ ಎಸ್ ಪಿ ಮೃತ್ಯುಂ ಜಯ ನೇತೃತ್ವದಲ್ಲಿ ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ ಇಬ್ಬರನ್ನು ಟ್ರ್ಯಾಪ್ ಮಾಡಲಾಗಿದ್ದು ಇಬ್ಬರು ಸರ್ಕಾರಿ ನೌಕರರು ಸಿಕ್ಕಿ ಬಿದ್ದಿದ್ದು ಸಧ್ಯ ವಶಕ್ಕೆ ತಗೆದುಕೊಂಡಿರುವ ಲೋಕಾಯುಕ್ತ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಚಿತ್ರದುರ್ಗ….,.