ಲೋಕಾಯುಕ್ತ ಬಲೆಗೆ ಬಿದ್ದ PDO – ಕೈ ತುಂಬ ಸಂಬಳವಿದ್ದರೂ ಲಂಚಕ್ಕಾಗಿ ಕೈ ಚಾಚಿ ಟ್ರ್ಯಾಪ್…..

Suddi Sante Desk
ಲೋಕಾಯುಕ್ತ ಬಲೆಗೆ ಬಿದ್ದ PDO – ಕೈ ತುಂಬ ಸಂಬಳವಿದ್ದರೂ ಲಂಚಕ್ಕಾಗಿ ಕೈ ಚಾಚಿ ಟ್ರ್ಯಾಪ್…..

ಮಂಗಳೂರು

ಲೋಕಾಯುಕ್ತ ಬಲೆಗೆ ಬಿದ್ದ​ ಪಿಡಿಒ ಹೌದು ಜಮೀನು ಖಾತೆ ಬದಲಾವಣೆ ಮಾಡಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಗಳೂರಿನ ಕೌಕ್ರಾಡಿ ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ನಡೆದಿದೆ

PDO ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು ವ್ಯಕ್ತಿಯೊಬ್ಬರಿಂದ 20 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಬೆಳ್ತಂಗಡಿ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್​ ಪಿಡಿಒ ಮಹೇಶ್ ಜಿಎನ್ ಕಾಯುಕ್ತ ಬಲೆಗೆ ಬಿದ್ದಿ ಪಿಡಿಒ ಆಗಿದ್ದಾರೆ

2017ರಲ್ಲಿ ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿಯೊಬ್ಬರು ಕೌಕ್ರಾಡಿಯಲ್ಲಿರುವ ತಮ್ಮ ಜಮೀನಿನ ಖಾತೆ ಬದಲಾವಣೆ ಮಾಡಿ ತಮ್ಮ ಹೆಸರಿಗೆ ಮಾಡಿಸಲು ಇಲ್ಲಿನ ಪಂಚಾಯತ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು.ಆದರೆ ಖಾತೆ ಬದಲಾ ವಣೆ ಆಗದಿರುವುದರಿಂದ 2021ರಲ್ಲಿ ಮತ್ತೆ ಗ್ರಾಮ ಪಂಚಾಯತ್‌ಗೆ ಅರ್ಜಿ ಸಲ್ಲಿಸಿದ್ದ ಅವರು ಶುಲ್ಕವನ್ನು ಸಂದಾಯ ಮಾಡಿದ್ದರು ಆದರೂ ಖಾತೆ ಬದಲಾವಣೆ ಆಗಿರಲಿಲ್ಲ.

ಹೀಗಾಗಿ ಕಳೆದ ಜೂನ್ 20ರಂದು ಈ ವ್ಯಕ್ತಿಯು ಕೌಕ್ರಾಡಿ ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಈ ಬಗ್ಗೆ ವಿಚಾರಿಸಿದ್ದರು ಈ ವೇಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ ಎನ್ ಖಾತೆ ಬದಲಾವಣೆಗೆ 20 ಸಾವಿರ ರೂ ಲಂಚದ ಬೇಡಿಕೆ ಯಿಟ್ಟಿದ್ದರು.

ಅದರಂತೆ ಜೂನ್ 22ರಂದು ದೂರುದಾರರಿಂದ ಆರೋಪಿ ಪಿಡಿಒ ಮಹೇಶ್ ಜಿ ಎನ್ 20 ಸಾವಿರ ರೂ. ಲಂಚದ ಹಣ ಸ್ವೀಕರಿಸುವಾಗ ಲೋಕಾ ಯುಕ್ತ ದಾಳಿ ನಡೆಸಿ ಬಂಧಿಸಿದ್ದರು ಜೊತೆಗೆ ಲಂಚದ ಹಣವನ್ನು ವಶಪಡಿಸಿಕೊಂಡಿದ್ದರು.

ಸುದ್ದಿ ಸಂತೆ ನ್ಯೂಸ್ ಮಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.