ಹುಬ್ಬಳ್ಳಿ –
ಮಾಸ್ಕ್ ಧರಿಸದೇ ತಿರುಗಾಡುತ್ತಿರುವವರಿಗೆ ದಂಡ ವಿಧಿಸಿ ಕೋವಿಡ್ ಪರೀಕ್ಷೆ ಮಾಡುವ ಕಾರ್ಯ ಹುಬ್ಬಳ್ಳಿಯಲ್ಲಿ ಮುಂದುವರೆದಿದೆ. ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದ ಬಳಿ ಮಾಸ್ಕ್ ಧರಿಸಿದ ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ದಂಡ ವಿಧಿಸಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಲಾಯಿತು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನೇತೃತ್ವದಲ್ಲಿ ಕಂದಾಯ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಪರ ಊರುಗಳಿಂದ ಆಗಮಿಸುವ ಹಾಗೂ ತೆರಳುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿ ಹೇಳಿದರು.
ಈ ಸಂದರ್ಭದಲ್ಲಿ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆಗೆ ನಡೆಸಲು ಗಂಟಲು ಹಾಗೂ ಮೂಗಿನ ದ್ರವಗಳನ್ನು ಸಂಗ್ರಹಿಸಲಾಯಿತು.
ಉಪವಿಭಾಗಾಧಿಕಾರಿ ಗೋಪಾಲಕೃಷ್ಣ, ಜಿಲ್ಲಾ ಆರೋಗ್ಯ ಅಧಿಕಾರಿ ಯಶವಂತ ಮದೀನಕರ್, ಹುಬ್ಬಳ್ಳಿ ನಗರ ತಹಶೀಲ್ದಾರ್ ಶಶಿಧರ ಮಾಡ್ಯಾಳ, ತಾಲೂಕು ವೈದ್ಯಾಧಿಕಾರಿ ಪ್ರಭು ಬಿರಾದರ ಸೇರಿದಂತೆ ಮತ್ತಿತರರು ಈ ಒಂದು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
ನಗರದ ಹಲವೆಡೆ ಮಾಸ್ಕ್ ಧರಿಸದೇ ತಿರುಗಾಡುತ್ತಿದ್ದ ಸಾರ್ವಜನಿಕರಿಗೆ ದಂಡವನ್ನು ಹಾಕಿ ಇನ್ನೂ ಕೆಲವು ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆಯನ್ನು ಮಾಡಲಾಯಿತು.