ಹುಬ್ಬಳ್ಳಿ ತಾಲೂಕಿನ ಶಿರೂರು ಹೋಬಳಿಯ ಕೋಳಿವಾಡ ಗ್ರಾಮದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಯಿತು. ಆಯೋಜಿಸಲಾದ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಭಾಗವಹಿಸಿದರು.

94 ಸಿ ಅಡಿ ಸರ್ಕಾರಿ ಭೂಮಿಯಲ್ಲಿ ಮನೆ ನಿರ್ಮಿಸಿದ 26 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮದ ರುದ್ರಭೂಮಿ ಭೂಮಿ ನೀಡಿದ ಚನ್ನಬಸಮ್ಮ ಕಣವಿ ಅವರಿಗೆ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರಾದ ಶ್ರೀಮತಿ ಚ್ರೈತ್ರಾ ಶಿರೂರ , ತಾಲ್ಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.






















