ಕಾರಟಗಿ –
7ನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ರಾಜ್ಯಾಾದ್ಯಂತ ರಾಜ್ಯ ಸರ್ಕಾರಿ ನೌಕರರು ಪ್ರತಿಭಟನೆ ಯೊಂದಿಗೆ ಮನವಿ ಸಲ್ಲಿಸುವ ಕಾರ್ಯ ನಡೆಯುತ್ತಿದ್ದು ಇತ್ತ ಕೊಪ್ಪಳ ದಲ್ಲು ನೌಕರರು ಪ್ರತಿಭಟನೆ ಮಾಡಿ ಮನವಿಯನ್ನು ಸಲ್ಲಿಸಿದರು
7ನೇ ವೇತನ ಆಯೋಗ ವರದಿ ಜಾರಿಗೊಳಿಸ ಬೇಕು.ಎನ್‌ಪಿಎಸ್ ನೌಕರರನ್ನು ಒಪಿಎಸ್‌ಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿಗೆ ಮನವಿ ಸಲ್ಲಿಸಿದರು.
ನೌಕರರ ಸಂಘದ ಗಂಗಾವತಿ ತಾಲ್ಲೂಕು ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ ಹೇರೂರು ನೇತೃತ್ವದಲ್ಲಿ ಈ ಒಂದು ಮನವಿ ಸಲ್ಲಿಸುವ ಕಾರ್ಯ ನಡೆಯಿತು ಇದೆ ವೇಳೆ ಮಾತನಾಡಿದ ಅವರು 7ನೇ ವೇತನ ಆಯೋಗದ ವರದಿಯಂತೆ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಣೆ ಹಿಂದೆಯೇ ಮಾಡಬೇಕಿತ್ತು.
ಪೃಕೃತಿ ವಿಕೋಪ, ಕೋವಿಡ್, ಪ್ರವಾಹ ಸಂದರ್ಭ ದಲ್ಲಿ ನೌಕರರು ಸರ್ಕಾರಕ್ಕೆ ನೆರವಾಗಿದ್ದಾರೆ. ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸ ಬೇಕು ಎನ್‌ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸಬೇಕು. ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಗೊಳಿಸಬೇಕು.
ಈ ಬಗ್ಗೆ ಸಚಿವರು ಸಿಎಂ ಗಮನ ಸೆಳೆಯಬೇಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಚನ್ನಬಸಪ್ಪ ವಕ್ಕಳದ, ಪದಾಧಿಕಾರಿಗ ಳಾದ ಹನುಮಂತಪ್ಪ ಗಿಡ್ಡಿ, ರಾಮಣ್ಣ ಸಿನ್ನೂರು, ಶಿವಶಂಕರ್ ಕಲ್ಮಠ, ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸವರಾಜ್ ರ‍್ಯಾವಳದ ಇತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿರಿದ್ದರು.
ಸುದ್ದಿ ಸಂತೆ ನ್ಯೂಸ್ ಕೊಪ್ಪಳ…..