This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಧಾರವಾಡ

ಮಾರ್ಚ್ 2 ಮತ್ತು 3 ರಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಆಯೋಜನೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆ…..

WhatsApp Group Join Now
Telegram Group Join Now

ಧಾರವಾಡ

ಮಾರ್ಚ್ 2 ಮತ್ತು 3 ರಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಆಯೋಜನೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಮಾರ್ಚ್ 2 ಮತ್ತು 3, 2024 ರಂದು ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಮಾರ್ಚ್ 2 ರಂದು ಬೆಳಗ್ಗೆ 10 ಗಂಟೆಗೆ ಜರುಗುವ ಉದ್ಘಾಟನಾ ಸಮಾರಂಭವನ್ನು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಅವರು ಉದ್ಘಾಟಿಸುವರು.ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿ ಗಳು ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.

ಈಗಾಗಲೇ ಜಿಲ್ಲೆಯ ಪುರುಷ ಸ್ಪರ್ಧಿಗಳು 808 ಹಾಗೂ 472 ಮಹಿಳಾ ಸ್ಪರ್ಧೆಗಳು ಸೇರಿ ಒಟ್ಟು 1280 ಸ್ಪರ್ಧಿಗಳು ಆನ್‍ಲೈನ್ ಮೂಲಕ ನೊಂದಣಿ ಮಾಡಿಕೊಂಡಿದ್ದಾರೆ. ಕ್ರೀಡಾಕೂಟ ದಲ್ಲಿ ಭಾಗವಹಿಸುವ ಕ್ರೀಡಾ ಸ್ಪರ್ಧಿಗಳಿಗೆ ಟಿ-ಶರ್ಟ್, ಕ್ಯಾಪ್ ವಿತರಿಸಲಾಗುವುದು. ಮತ್ತು ಕ್ರೀಡಾಪಟುಗಳಿಗೆ ಎರಡು ದಿನ ಊಟದ ವ್ಯವಸ್ಥೆ ಮಾಡಲಾಗಿದೆ.

ಮಾರ್ಚ್ 2. 2024 ರಂದು ನೋಂದಣಿ ಸಮಯದಲ್ಲಿ ತಮ್ಮ ಇಲಾಖೆಯಿಂದ ಕೊಟ್ಟಿರುವ ಗುರುತಿನ ಚೀಟಿ ಮತ್ತು ಸೇವಾ ಪ್ರಮಾಣ ಪತ್ರ ವನ್ನು ತೋರಿಸಿ ಹಾಜರಾತಿ ಪ್ರಮಾಣಪತ್ರ ವನ್ನು ಪಡೆಯಬೇಕು. ಜಿಲ್ಲಾ ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಪ್ರಮಾಣಪತ್ರಗಳು ಹಾಗೂ ಪದಕಗಳನ್ನು ವಿತರಿಸಿ, ಗೌರವಿಸಲಾಗುವುದು.

ಜಿಲ್ಲಾಮಟ್ಟದ ಸಾಂಸ್ಕøತಿಕ ಸ್ಪರ್ಧೆಗಳು
ಮಾರ್ಚ್ 3.2024 ರ ಬೆಳಿಗ್ಗೆ 10 ಗಂಟೆಗೆ ನಗರದ ಕನ್ನಡದ ಕುಲಪುರೋಹಿತ ಆಲೂರು ವೆಂಕಟ ರಾವ್ ಸಂಸ್ಕೃತಿಕ ಸಭಾಭವನದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲಾಗುವುದು.ಈ ಸ್ಪರ್ಧೆಗಳ ಉದ್ಘಾಟನೆಯನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ ಅವರು ನೆರವೇರಿಸಲಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ, ಭೂ ದಾಖಲೆಗಳ ಉಪನಿರ್ದೇಶಕ ಮೋಹನ ಶಿವನ್ನವರ,

ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಎಸ್.ಎಫ್ .ಸಿದ್ದನಗೌಡರ ಅವರು ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸುವರು.

ಸ್ಪರ್ಧೆ ಹಾಗೂ ಸ್ಪರ್ಧಾ ಸ್ಥಳಗಳ ವಿವರ
ಆರ್ .ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಟೆನ್ನಿಕ್ವಾಯಿಟ್, ಕಬಡ್ಡಿ, ಥ್ರೋಬಾಲ್ ಕ್ರೀಡೆಗಳು ಮತ್ತು ಆರ್.ಎನ್.ಶೆಟ್ಟಿ ಒಳಾಕ್ರೀಡಾಂಗಣದಲ್ಲಿ ಟೇಬಲ್ ಟೆನ್ನಿಸ್, ಶಟಲ್ ಬ್ಯಾಡ್ಮಿಂಟನ್, ಕುಸ್ತಿ, ಪವರ್ ಲಿಫ್ಟಿಂಗ್, ದೇಹದಾಡ್ಯರ್ಯತೆ ಸ್ಪರ್ಧೆಗಳು ಹಾಗೂ ಹುಬ್ಬಳ್ಳಿ ಎಪಿ.ಎಂ.ಸಿ.ಯ ಶಿವಗಿರಿ ಈಜುಕೊಳದಲ್ಲಿ ಈಜು ಸ್ಪರ್ಧೆ, ಕೆಸಿಡಿ ವಿಜ್ಞಾನ ಮಹಾವಿದ್ಯಾಲಯದ ಮೈದಾನದಲ್ಲಿ ಫುಟ್ಬಾಲ್, ಹಾಕಿ, ಬಾಸ್ಕೆಟ್ ಬಾಲ್ ಪಂದ್ಯಗಳು, ಎಲ್.ಐ.ಸಿ. ಜಿಮಖಾನಾ ದಲ್ಲಿ ಚೆಸ್, ಕೇರಂ ಆಟಗಳು, ರಾಜ್ಯಾಧ್ಯಕ್ಷ ಪೆವಲಿಯನ್

ಈಜು ಕೊಳದ ಹತ್ತಿರ ಟೆನ್ನಿಸ್ ಆಟ, ಯು,ಪಿ,ಎಸ್ ಶಾಲೆಯ ಮೈದಾನದಲ್ಲಿ ಬಾಲ್ ಬ್ಯಾಡ್ಮಿಂಟನ್ ಆಟಗಳು, ಮಲ್ಲಸಜ್ಜನ ವ್ಯಾಯಾಮ ಶಾಲೆಯಲ್ಲಿ ಹ್ಯಾಂಡ್‍ಬಾಲ್ ಸ್ಪರ್ಧೆ ಹಾಗೂ ಕುಲ ಪುರೋಹಿತ ಆಲೂರು ವೆಂಕಟ ರಾವ್ ಸಭಾಭವನದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ಜರುಗಲಿವೆ.

ಈ ಸ್ಪರ್ಧೆಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆಯು ಒಟ್ಟು 65 ಜನ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಮತ್ತು ಕರ್ನಾಟಕ ವಿಶ್ವವಿದ್ಯಾಲ ಯದ ಬಿಪಿ.ಎಡ್ ಮತ್ತು ಎಂ.ಪಿ.ಎಡ್‍ 90 ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ. ಸ್ಪರ್ಧೆಗಳು ಅತ್ಯಂತ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲಾಗುವುದು. ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮ ದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ನೌಕರರು, ವೃಂದ ಸಂಘಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕರ್ನಾಟಕ ರಾಜ್ಯ ನೌಕರ ಸಂಘದ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಯಡಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk