ಹೃದಯಾಘಾತದಿಂದ ಪೊಲೀಸ್ ಪೇದೆ ಸಾವು – ಕಾಂತರಾಜು ನಿಧನಕ್ಕೆ ಇಲಾಖೆಯ ಅಧಿಕಾರಿಗಳು,ಸಿಬ್ಬಂದಿಗಳು ಸಂತಾಪ…..

Suddi Sante Desk
ಹೃದಯಾಘಾತದಿಂದ ಪೊಲೀಸ್ ಪೇದೆ ಸಾವು – ಕಾಂತರಾಜು ನಿಧನಕ್ಕೆ ಇಲಾಖೆಯ ಅಧಿಕಾರಿಗಳು,ಸಿಬ್ಬಂದಿಗಳು ಸಂತಾಪ…..

ತುಮಕೂರ

ಹೃದಯಾಘಾತದಿಂದ ಪೊಲೀಸ್ ಕಾನ್ಸ್ಟೇಬಲ್ ರೊಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ.ಕಾಂತರಾಜು ಮೃತಪಟ್ಟ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದಾರೆ. ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದಾಗ ಕಾಂತರಾಜು ಅವರಿಗೆ ಹೃದಯಾಘಾತ ಸಂಭವಿಸಿದೆ.

ಕೂಡಲೇ ಅವರನ್ನು ಹುಳಿಯಾರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಕಾಂತರಾಜು ಮೃತಪಟ್ಟಿದ್ದಾರೆ.ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡಿದ ಪಿಸಿ ಕಾಂತರಾಜು ನಿಧನಕ್ಕೆ ಸಹೋದ್ಯೋ ಗಿಗಳು ಸಂತಾಪ ಸೂಚಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ತುಮಕೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.