ಕಲಬುರಗಿ –
ಕೌಟುಂಬಿಕ ಕಲಹಕ್ಕೆ ಬೇಸತ್ತು ಪೊಲೀಸ್ ಪೇದೆಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ನಗರದ ಉದನೂರು ರಸ್ತೆಯಲ್ಲಿರುವ ಜಮೀನಲ್ಲಿ ಈ ಒಂದು ಘಟನೆ ನಡೆದಿದೆ.
ದೊಡ್ಡೇಶ್(40) ಮೃತ ದುರ್ದೈವಿಯಾಗಿದ್ದು ಮಾಡಬೂಳ ಠಾಣೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ದೊಡ್ಡೇಶ್. ನಗರದ ಹೈಕೋರ್ಟ್ ಬಳಿಯ ಮನೆಯಲ್ಲಿ ವಾಸವಾಗಿದ್ದರು.
ಇತ್ತೀಚೆಗೆ ಕೌಟುಂಬಿಕ ಕಲಹಗಳಿಂದ ಮಾನಸಿಕವಾಗಿ ಹೈರಾಣಾಗಿದ್ದರಂತೆ ಸುದ್ದಿ ತಿಳಿದ ಬಳಿಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆ ಪ್ರಕರಣ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ
ಸುದ್ದಿ ಸಂತೆ ನ್ಯೂಸ್ ಕಲಬುರಗಿ…..