ಬೆಂಗಳೂರು –
ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಪಕ್ಷವು ಪ್ರತಿಭಟನೆ ಮಾಡಿದರು ಹೌದು ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗ ದಲ್ಲಿ ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿ ಸಲು ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜೇಯೆಂದ್ರ ನೇತೃತ್ವ ದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿ, ರೈತರಿಗೆ ಬರ ಪರಿಹಾರ ನೀಡದೆ ಜನ ವಿರೋಧಿ ಕಾರ್ಯಗಳನ್ನು ಮಾಡುತ್ತಿರುವ ಹಾಗೂ ಶಾಸಕರ ಅನುದಾನ ನೀಡುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು
ಇನ್ನೂ ಲಾಕ್ ಗಳೊಂದಿಗೆ ಮುಖ್ಯಮಂತ್ರಿಗಳ ಕಚೇರಿ ಸೇರಿದಂತೆ ಹಲವು ಕಚೇರಿ ಗಳಿಗೆ ಬೀಗ ಹಾಕಲು ಮುಂದಾದ ಬಿಜೆಪಿ ನಾಯಕರನ್ನು ಪೊಲೀಸರು ಬಂಧನ ಮಾಡಿದರು ಇದೇ ವೇಳೆ ಕಚೇರಿ ಗಳಿಗೆ ಬೀಗ ಹಾಕುವಂತೆ ಆಗ್ರಹಿಸಲಾ ಯಿತು.
ಈ ಒಂದು ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಗಳಾದ ಬಸವರಾಜ ಬೊಮ್ಮಾಯಿ ,ವಿರೋಧ ಪಕ್ಷದ ನಾಯಕರಾದ ಶ್ರೀ R ಅಶೋಕ್ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರ,ಮಾಜಿ ಉಪ ಮುಖ್ಯ ಮಂತ್ರಿ ಗಳಾದ ಅಶ್ವಥ್ ನಾರಾಯಣ, ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜನ ಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..