ಧಾರವಾಡ –
ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಧಾರವಾಡದಲ್ಲೂ ಆಚರಣೆ ಮಾಡಲಾಯಿತು. ದಿನಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಪೊಲೀಸ್ ಡಿಎಆರ್ ಮೈದಾನದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಗಣ್ಯರು ಹುತಾತ್ಮರಾದ ಪೊಲೀಸ್ ಸಿಬ್ಬಂದಿಗಳ ಕುಟುಂಬ ಸ್ಥರು ಪಾಲ್ಗೊಂಡು ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ನೆನೆದು ಗೌರವ ವಂದನೆಯನ್ನು ಸಲ್ಲಿಸಿದರು.
ಧಾರವಾಡ ಎಸ್ಪಿ ಲೋಕೇಶ್ ಜಗಾಲಸರ್ ನೇತೃತ್ವದಲ್ಲಿ ಈ ಒಂದು ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಶ್ರೀಮತಿ ಕೆ ಜಿ ಶಾಂತಿ ಅವರು ಪಾಲ್ಗೊಂಡು ಹುತಾತ್ಮರಾದ ಪೊಲೀಸರಿಗೆ ಗೌರವ ವಂದನೆಯನ್ನು ಸಲ್ಲಿಸಿದರು.ಇದೇ ವೇಳೆ ಹುತಾತ್ಮ ಪೊಲೀಸ್ ಕುಟುಂಬಸ್ಥರು ಕಾರ್ಯಕ್ರಮದಲ್ಲೂ ಭಾಗಿಯಾಗಿ ಗೌರವ ವಂದನೆಯನ್ನು ಸಲ್ಲಿಸಿದರು.