ಬೆಂಗಳೂರು –
ಪೊಲೀಸ್ ಸಬ್ ಇನ್ಸ್ಪೆಕ್ಟರ್ ರೊಬ್ಬರು ನೇಣು ಹಾಕಿ ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿ ನಲ್ಲಿ ನಡೆದಿದೆ.ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ.ದಕ್ಷಿಣ ವಿಭಾಗದ ಸಿಇಎನ್ ಸಬ್ ಇನ್ಸ್ಪೆಕ್ಟರ್ ಸುದರ್ಶನ್ ಶೆಟ್ಟಿ (54) ಆತ್ಮಹತ್ಯೆ ಮಾಡಿಕೊಂಡವರರಾಗಿ ದ್ದಾರೆ.ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಆತ್ಮಹತ್ಯೆ ನಡೆದಿದೆ.

ಪ್ರಾಥಮಿಕ ತನಿಖೆಯ ಮೂಲಗಳ ಪ್ರಕಾರ ಇವರು ಮಾನ ಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ಈ ಆತ್ಮಹತ್ಯೆ ನಡೆದಿದೆ.ಕೆಲ ವರ್ಷಗಳ ಹಿಂದೆ ಕುಡಿತದ ಚಟಕ್ಕೆ ಒಳಗಾಗಿದ್ದ ಸುದರ್ಶನ್ ಶೆಟ್ಟಿ, ರಿಹ್ಯಾಬಿ ಟೇಷನ್ ಸೆಂಟರ್ಗೆ ದಾಖಲಾಗಿ ವ್ಯಸನಮುಕ್ತರಾಗಿದ್ದರು. ಅದಾಗ್ಯೂ ಮನಸ್ಥಿತಿ ಸರಿ ಇರದ ಕಾರಣ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.