ಶಿವಮೊಗ್ಗ –
ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರ ಮೇಲೆ ಗಂಭೀರ ವಾದ ಆರೋಪ ವೊಂದು ಕೇಳಿ ಬಂದಿದೆ.ಇಮ್ತಿಯಾಜ್ ಸಂಗೀತ ಶಿಕ್ಷಕನ ಮೇಲೆ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿರುವುದಾಗಿ ಶಿಕ್ಷಕ ಇಮ್ತಿಯಾಜ್ ಮೇಲೆ ಆರೋಪ ಮಾಡಲಾಗಿದೆ.ಹೀಗಾಗಿ ಸರ್ಕಾರಿ ವಸತಿ ಶಾಲೆಯ ಈ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲು ಮಾಡಲಾಗಿದ್ದು ಶಿಕ್ಷಕನನ್ನು ಬಂಧಿಸಲಾಗಿದೆ.
ಈ ಶಿಕ್ಷಕ ಶಾಲೆಯಲ್ಲಿ ಹಾಗೂ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಗಳ ಜೊತೆ ಅಸಭ್ಯ ವರ್ತನೆ ತೋರಿದ್ದಾರೆಂದು ಆರೋಪಿಸಿ ವಸತಿ ಶಾಲೆಯ ಪ್ರಾಂಶುಪಾಲರಿಗೆ ವಿದ್ಯಾರ್ಥಿಗಳು ದೂರು ನೀಡಿ ದ್ದಾರೆ.ವಸತಿಶಾಲೆಯ ಪ್ರಾಂಶುಪಾಲರು ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.
ದೂರು ನೀಡಿದ್ದ ಹಿನ್ನೆಲೆ ತೀರ್ಥಹಳ್ಳಿ ಪೋಲಿಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ತೀರ್ಥಹಳ್ಳಿ ಪೊಲೀಸರು ಠಾಣೆಯಲ್ಲಿ ಶಿಕ್ಷಕನ ಮೇಲೆ ಪೋಕ್ಸೊ ಕೇಸ್ ದಾಖಲಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..