ಉತ್ತರ ಪ್ರದೇಶ –
ಶಾಲಾ ಮಕ್ಕಳನ್ನು ಒತ್ತೆಯಾಳಾಗಿಟ್ಟುಕೊಂಡು ವರ್ಗಾವಣೆ ಆದೇಶ ಹಿಂಪಡೆಯುವಂತೆ ಶಿಕ್ಷಕರೇ ಒತ್ತಡ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.ಹೌದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಬೆಹ್ಜಾಮ್‌ನಲ್ಲಿರುವ ಕಸ್ತೂರ ಬಾ ಗಾಂಧಿ ಬಾಲಿಕಾ ವಿದ್ಯಾಲಯದ ಸುಮಾರು 24 ವಿದ್ಯಾರ್ಥಿಗಳನ್ನ ಒತ್ತೆಯಾಳಾಗಿ ಇಟ್ಟುಕೊಳ್ಳಲಾಗಿತ್ತು ಇಬ್ಬರು ಶಿಕ್ಷಕರಿಗೆ ವರ್ಗಾವಣೆ ಆದೇಶ ಹೊರಡಿಸಿದ್ದರಿಂದ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಶಾಲೆಗೆಂದು ಬಂದ 24 ವಿದ್ಯಾರ್ಥಿಗಳನ್ನು ಛಾವಣಿಗೆ ಕರೆದೊಯ್ದು ಬೀಗ ಹಾಕಲಾಗಿತ್ತು.ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಹಲವಾರು ಗಂಟೆಗಳ ನಂತರ ವಿದ್ಯಾರ್ಥಿಗಳನ್ನು ತಮ್ಮ ಹಾಸ್ಟೆಲ್‌ಗೆ ಕರೆತರುವಲ್ಲಿ ಯಶಸ್ವಿಯಾದರು.ಈ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ಇಬ್ಬರು ಶಿಕ್ಷಕರು ಮಕ್ಕಳನ್ನು ಬಿಟ್ಟು ಕಳುಹಿಸಿದ್ದಾರೆ. ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.