ಧಾರವಾಡ –
ರಾಜ್ಯ ರಸ್ತೆ ಸಾರಿಗೆ ನೌಕರರ ಅನಿರ್ಧಿಷ್ಟಾವಧಿಯ ಮುಷ್ಕರದ ಹಿನ್ನಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡ ಲಾಗಿದೆ. ಸಾರಿಗೆ ನೌಕರರ ಪ್ರತಿಭಟನೆಯ ಹಿನ್ನಲೆ ಯಲ್ಲಿ ಈ ಒಂದು ನಿಧಾರವನ್ನು ಕವಿವಿ ಯ ಪರೀಕ್ಷಾ ವಿಭಾಗದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ.
ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕರ್ನಾಟಕ ವಿಶ್ವ ವಿದ್ಯಾಲಯ ಏಪ್ರಿಲ್ 8 ಹಾಗೂ 9 ರಂದು ನಡೆಯಲಿರುವ ಪರೀಕ್ಷೆಯನ್ನು ಮುಂದೂಡಿ ಆದೇಶ ವನ್ನು ಹೊರಡಿಸಿದೆ.
ದಿನಾಂಕ 08-04-2021 ಮತ್ತು 09-04-2021 ರಂದು ನಡೆಯಲಿರುವ ಎಲ್ಲಾ ಸ್ನಾತಕ ಕೋರ್ಸುಗಳ ಪರೀಕ್ಷೆಯನ್ನು ಮುಂದೂಡ ಲಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಪ್ರೋ ರವೀಂದ್ರನಾಥ ಎನ್ ಕದಮ್ ತಿಳಿಸಿದ್ದಾರೆ.
ಈ ಕುರಿತಂತೆ ಕರ್ನಾಟಕ ವಿವಿ ಕುಲಸಚಿವರು (ಮೌಲ್ಯಮಾಪನ) ಪ್ರೊ.ರವೀಂದ್ರನಾಥ್ ಕದಂ ಸುತ್ತೋಲೆ ಹೊರಡಿಸಿ ಈ ಮೂಲಕ ಎಲ್ಲಾ ಮಹಾವಿದ್ಯಾಲಯಗಳ ಪ್ರಾಚಾರ್ಯರಿಗೆ, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ತಿಳಿಸಿದ್ದಾರೆ. ರಾಜ್ಯದ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿ ರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹೋಗಿ ಪರೀಕ್ಷೆ ಬರೆಯಲು ತೊಂದರೆ ಆಗಲಿದ್ದು ಹೀಗಾಗಿ ಈ ಒಂದು ನಿರ್ಧಾರವನ್ನು ಕೈಗೊಂಡಿರುವುದಾಗಿ ಹೇಳಿದರು