ಬೆಂಗಳೂರು –
ಕೋವಿಡ್ ಹಿನ್ನಲೆಯಲ್ಲಿ ರಾಜ್ಯದಲ್ಲಿನ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ ಚುನಾವಣೆ ಗಳನ್ನು ಮುಂದೂಡಲಾಗುತ್ತದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೊರೊನಾ ಸೋಂಕು ತೀವ್ರ ಹೆಚ್ಚಳವಾದ ಹಿನ್ನೆಲೆ ಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದರು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಈ ಬಗ್ಗೆ ಮಾಹಿ ತಿ ನೀಡಿದ್ದು, ಚುನಾವಣೆ ಮುಂದೂಡಲು ಕೇಳಿಬಂ ದ ಅಭಿಪ್ರಾಯಗಳನ್ನು ಪರಿಗಣಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅವಧಿ ಮುಗಿದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನ್ನು ನೇಮಿಸಲಾಗುವುದು.ಸಚಿವ ಸಂಪುಟ ಸಭೆಯ ಲ್ಲಿ ಚರ್ಚಿಸಿ ನಿರ್ಧಾರ ಕೈಗೊಂಡು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಸರ್ಕಾರದ ತೀರ್ಮಾನ ತಿಳಿಸಲಾಗುವುದು ಎಂದು ಹೇಳಿದ್ದಾರೆ