ಧಾರವಾಡ –
ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ – ಶಿವಾಜಿ ಸರ್ಕಲ್ ದಿಂದ ಹೊರಡಲಿದೆ ಮೆರವಣಿಗೆ….. BSY ಗೆ ಸಾಥ್ ನೀಡಲಿದ್ದಾರೆ ಜಿಲ್ಲೆಯ ಶಾಸಕರು ಪಕ್ಷದ ಮುಖಂಡರು ಕಾರ್ಯಕರ್ತರು ಹೌದು
ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಸಲಿದ್ದಾರೆ.ಹೌದು ಏಪ್ರೀಲ್ 15 ರಂದು ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ.
ಸೋಮವಾರ ಬೆಳಿಗ್ಗೆ 10 ಗಂಟೆಗೆ ಧಾರವಾಡದ ಶಿವಾಜಿ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಮೆರವಣಿಗೆಯ ಮೂಲಕ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮ ಪತ್ರವನ್ನು ಸಲ್ಲಿಸಲಿದ್ದು ಈ ಒಂದು ಮೆರವಣಿಗೆ ಯಲ್ಲಿ ಜಿಲ್ಲೆಯ ಮೂಲೆ ಮೂಲೆಗಳಿಂದ ಅಪಾರ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಮುಖಂ ಡರು ಆತ್ಮೀಯರು ಅಭಿಮಾನಿಗಳು
ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದು ಇದರೊಂದಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜಿಲ್ಲೆಯ ಪಕ್ಷದ ಶಾಸಕರಾದ ಎಮ್ ಆರ್ ಪಾಟೀಲ್,ಮಹೇಶ್ ತೆಂಗಿನಕಾಯಿ, ಅರವಿಂದ ಬೆಲ್ಲದ,ಮಾಜಿ ಶಾಸಕರಾದ ಅಮೃತ ದೇಸಾಯಿ,ಸೀಮಾ ಮಸೂತಿ,ಶಂಕರ ಪಾಟೀಲ ಮುನೇನಕೊಪ್ಪ,ಸೇರಿದಂತೆ ಹಲವರು ಪಾಲ್ಗೊಳ್ಳ ಲಿದ್ದು
ಇವರೊಂದಿಗೆ ಜಿಲ್ಲಾಧ್ಯಕ್ಷರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಮುಖಂಡರು ಪಾಲ್ಗೊಳ್ಲಲಿದ್ದು ಈ ಒಂದು ಕಾರ್ಯಕ್ರಮದಲ್ಲಿ ಬನ್ನಿ ಪಾಲ್ಗೊಂಡು ಶಕ್ತಿ ತುಂಬಿ ಮತ್ತೊಮ್ಮೆ ಸುಭದ್ರ ದೇಶವನ್ನು ಕಟ್ಟುವ ನಿಟ್ಟಿನಲ್ಲಿ ಬೆಂಬಲಿಸಿ ಎಂದು ಪ್ರಹ್ಲಾದ್ ಜೋಶಿಯವರು ಕರೆ ನೀಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..