ಪ್ರತಾಪ್ ರೆಡ್ಡಿ ಬೆಂಗಳೂರು ನಗರ ನೂತನ ಪೊಲೀಸ್ ಕಮೀಷನರ್ ಕಮಲ್ ಪಂತ್ ವರ್ಗಾವಣೆ…..

Suddi Sante Desk

ಬೆಂಗಳೂರು

ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.ಕಮಿಷನರ್ ಆಗಿದ್ದ ಕಮಲ್ ಪಂತ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.ಕೆಎಸ್‌ಆರ್‌ಪಿ ಎಡಿಜಿಪಿ ಆಗಿದ್ದ ಅಲೋಕ್‌ ಕುಮಾರ್ ಅವರನ್ನು ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಅವರ ಜಾಗಕ್ಕೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ (ಪ್ರಭಾರ್)ಆಗಿದ್ದ ಆರ್.ಹಿತೇಂದ್ರ ಅವರನ್ನು ವರ್ಗಾಯಿಸ ಲಾಗಿದೆ.ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್‌ ಅನುಚೇತ್ ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದ್ದು ಅವರ ಜಾಗಕ್ಕೆ ಇನ್ನೂ ಯಾರನ್ನೂ ನೇಮಿಸಿಲ್ಲ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.