ಹುಬ್ಬಳ್ಳಿ –
ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿ ಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿ,ಬಸ್ ಡಿಪೋಗಳು, ಹಳೆ ಬಸ್ ನಿಲ್ದಾಣ, ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ ಮತ್ತು ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣ, ನವಲಗುಂದ,ಅಣ್ಣಿಗೇರಿ,ಕಲಘಟಗಿ ಬಸ್ ನಿಲ್ದಾಣ ಸೇರಿದಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವ್ಯಾಪ್ತಿಯ ಬಸ್ ನಿಲ್ದಾಣಗಳಲ್ಲಿ ರವಿವಾರ ಸೋಡಿ ಯಂ ಹೈಪೋಕ್ಲೋರೈಡ್ ದ್ರಾಣದಿಂದ ಸ್ಯಾನಿಟೇಷ ನ್ ಮಾಡಲಾಯಿತು.

ಕೋವಿಡ್ ಎರಡನೆ ಅಲೆ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನಗಳ ಪ್ರಕಾರ ಸಾರಿಗೆ ಸಂಸ್ಥೆಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಬಸ್ಸುಗಳನ್ನು ನಿತ್ಯ ಸ್ಯಾನಿಟೇಷನ್ ಮಾಡಲಾಗುತ್ತದೆ. ಬಸ್ ಮತ್ತು ಬಸ್ ನಿಲ್ದಾಣಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾ ಯಗೊಳಿಸಲಾಗಿದೆ.ಬಸ್ಸುಗಳಲ್ಲಿ ಆಸನಗಳ ಸಂಖ್ಯೆ ಯ ಶೇಕಡಾ 50ರಷ್ಟು ಜನರು ಮಾತ್ರ ಪ್ರಯಾಣಿಸ ಲು ಅನುಮತಿಸಲಾಗುತ್ತದೆ.ಕೋವಿಡ್ ನಿಯಮಾವ ಳಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾರ್ವಜನಿಕರು ಸಂಸ್ಥೆಯೊಂದಿಗೆ ಸಹಕರಿಸಬೇಕು ಎಂದು ವಾಕರಸಾ ಸಂಸ್ಥೆ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೇಳಿದ್ದಾರೆ

ಇನ್ನೂ ಇದರೊಂದಿಗೆ ಕೊರೊನಾ ಸೋಂಕು ಹರಡು ವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳ ಪಾಲ ನೆಯ ಮಹತ್ವದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಕರಿಗೆ ನೀಡುವ ಟಿಕೆಟ್ ಗಳಲ್ಲಿ ಕೊರೊನಾ ದಿಂದ ರಕ್ಷಿಸಿಕೊಳ್ಳಲು ತಪ್ಪದೆ ಮಾಸ್ಕ್ ಧರಿಸಿರಿ” “ಬಸ್ ಮತ್ತು ಬಸ್ ನಿಲ್ದಾಣದಲ್ಲಿ ಮಾಸ್ಕ್ ಧರಿಸು ವುದು ಕಡ್ಡಾಯ” “ನಿಮ್ಮ ಸುರಕ್ಷತೆಗಾಗಿ ಸ್ಯಾನಿಟೈಸ ರ್ ಬಳಸಿರಿ” ಮುಂತಾದ ಸಂದೇಶಗಳನ್ನು ಮುದ್ರಿಸ ಲಾಗುತ್ತಿದೆ.

ಇನ್ನೂ ಇದರೊಂದಿಗೆ ಕೋವಿಡ್ ಎರಡನೇ ಅಲೆಯ ಪರಿಣಾಮ ಪಕ್ಕದ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಅತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ಮಹಾರಾಷ್ಟ್ರ ರಾಜ್ಯಕ್ಕೆ ಸಂಚರಿಸುವ ಎಲ್ಲಾ ಮಾದ ರಿಯ ಬಸ್ಸುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ