ಬೆಂಗಳೂರು –
ಫೆಬ್ರವರಿ 17ರಂದು ಬಜೆಟ್ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ದತೆ ಯನ್ನು ಮಾಡಿಕೊಳ್ಳುತ್ತಿದ್ದಾರೆ.ಹೌದು ಈ ಕುರಿ ತಂತೆ ಈಗಾಗಲೇ ತೆರೆ ಮರೆಯಲ್ಲಿ ಎಲ್ಲಾ ಸಿದ್ದತೆ ಗಳನ್ನು ಮಾಡಿಕೊಳ್ಳುತ್ತಿದ್ದಾರೆ.ಇದು ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಆಗಿದ್ದು ಹೀಗಾಗಿ ಈ ಬಾರಿ ಹೆಚ್ಚುವರಿ ಆಯವ್ಯಯವನ್ನು ಮಂಡನೆ ಮಾಡಲು ಮುಖ್ಯಮಂತ್ರಿ ಸಿದ್ದರಾಗುತ್ತಿದ್ದಾರೆ. ಫೆಬ್ರವರಿ 17ರಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಲು ನಿರ್ಧರಿಸಿದ್ದು ಜನಪ್ರಿಯ ಯೋಜನೆಗಳ ಘೋಷಣೆಯನ್ನು ಬರುವ ಚುನಾವಣೆಯನ್ನು ಮುಂದಿಟ್ಟುಕೊಂಡು ಘೋಷಣೆ ಮಾಡುವ ಸಾಧ್ಯತೆ ಇದೆ.
ಈ ತಿಂಗಳ 2ನೇ ವಾರದ ನಂತರ ಇಲಾಖಾವಾರು ಸಚಿವರು ಮತ್ತು ಅಧಿಕಾರಿಗಳ ಪ್ರಗತಿ ಪರಿಶೀ ಲನಾ ಸಭೆ ಆರಂಭವಾಗಲಿದೆ.ಈಗಾಗಲೇ ಈ ಕುರಿತಂತೆ ಮುಖ್ಯಮಂತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ,ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು,ಪ್ರಧಾನ ಕಾರ್ಯ ದರ್ಶಿಗಳು, ಕಾರ್ಯದರ್ಶಿಗಳು ಮತ್ತಿತರರಿಗೆ ಬಜೆಟ್ ಮಂಡನೆಯ ಪೂರ್ವ ಸಿದ್ದತೆಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರಂತೆ.
ಸಾಮಾನ್ಯವಾಗಿ ಪ್ರತಿ ವರ್ಷ ಜನವರಿ ತಿಂಗಳ 2ನೇ ವಾರದಲ್ಲಿ ಪ್ರಸಕ್ತ ವರ್ಷದ ಜಂಟಿ ಅಧಿವೇ ಶನ ನಂತರ ಬಜೆಟ್ ಮಂಡನೆಯಾಗುತ್ತಿತ್ತು. ಆದರೆ ಕಳೆದೆರಡು ವರ್ಷಗಳಿಂದ ಈ ಸಂಪ್ರದಾ ಯಕ್ಕೆ ತಿಲಾಂಜಲಿ ಹಾಡಿರುವ ಸರ್ಕಾರ ಜಂಟಿ ಅಧಿವೇಶನ ಮತ್ತು ಬಜೆಟ್ ಮಂಡನೆಯನ್ನು ಏಕಕಾಲದಲ್ಲಿ ನಡೆಸಲು ಮುಂದಾಗಿದೆ.
ಫೆ 16 ರಂದು ಗುರುವಾರ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಳಿಕ ಸಿಎಂ ಬೊಮ್ಮಾಯಿ ಅವರು ಶುಕ್ರವಾರ ಬಜೆಟ್ ಮಂಡಿಸಿ ನಂತರ ಸೋಮವಾರದಿಂದ ಬಜೆಟ್ ಮೇಲೆ ಚರ್ಚೆ ಆರಂಭವಾಗಲಿದೆ. ಆದಾಯ ಸಂಗ್ರಹ ಉತ್ತಮವಾಗಿರುವುದರಿಂದ ಚುನಾವಣಾ ಬಜೆಟ್ ಮಂಡನೆಗೆ ಹಾದಿ ಸುಗಮ ಗೊಳಿಸಿದೆ.ಹೆಚ್ಚುವರಿ ಬಜೆಟ್ ಮಂಡನೆಗೆ ತಯಾರಿಯನ್ನು ಈ ಬಾರಿ ಸಿಎಂ ಬೊಮ್ಮಾಯಿ ಮಾಡಿಕೊಂಡಿದ್ದಾರೆ.
ಹೌದು ಹೆಚ್ಚುವರಿ ಬಜೆಟ್ ಮಂಡನೆಗೆ ಸಜ್ಜಾಗಿ ದ್ದಾರೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಲಾಕ್ಡೌತನ್ ಹಿನ್ನೆಲೆ ಆದಾಯ ಕೊರತೆಯ ಬಜೆಟ್ ಮಂಡನೆಯಾಗಿತ್ತು.ಈ ಬಾರಿ ಹೆಚ್ಚುವರಿ ಆಯ ವ್ಯಯ ಮಂಡನೆ ಮಾಡಲು ಸಿಎಂ ಸಿದ್ಧತೆ ನಡೆಸಿ ದ್ದಾರೆ.ರಾಜ್ಯದ ಆರ್ಥಿಕತೆ ಚೇತರಿಕೆ ಕಂಡಿದ್ದು ತೆರಿಗೆ ಮೂಲಗಳು ಗುರಿ ಮೀರಿ ಆದಾಯ ಸಂಗ್ರಹ ಮಾಡುತ್ತಿವೆ.2022-23 ಸಾಲಿನ ಮೊದಲಾರ್ಧ ವರ್ಷದಲ್ಲಿ ರಾಜ್ಯದ ಬೊಕ್ಕಸಕ್ಕೆ 1 ಲಕ್ಷ ಕೋಟಿಗೂ ಅಧಿಕ ರಾಜಸ್ವ ಸ್ವೀಕೃತಿಯಾಗಿದೆ.
ಇದರಲ್ಲಿ ಕೇಂದ್ರದ ಸಹಾಯಾನುದಾನ, ತೆರಿಗೆ ಪಾಲು ಸೇರಿದೆ. ಇತ್ತ ಜಿಎಸ್ಟಿ ಸಂಗ್ರಹ ನಿರೀಕ್ಷೆಗೂ ಮೀರಿ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹಿಸುವ ಎಲ್ಲ ಇಲಾಖೆಗಳು ಬಜೆಟ್ ಗುರಿ ಮೀರಿ ಆದಾಯ ಸಂಗ್ರಹಿಸುತ್ತಿರುವುದು ಸಿಎಂ ಬೊಮ್ಮಾಯಿ ಅವರನ್ನು ನಿರಾಳರನ್ನಾಗಿಸಿದೆ. ಇನ್ನೂ ಪ್ರಮುಖವಾಗಿ ಸಧ್ಯ ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ಎರಡು ಪ್ರಮುಖ ವಿಚಾರ ಗಳು ಮುಖ್ಯವಾಗಿದ್ದು ವೇತನ ಪರಿಷ್ಕ್ರರಣೆಗಾಗಿ ಈಗಾಗಲೇ ಸಮಿತಿಯನ್ನು ರಚನೆ ಮಾಡಲಾ ಗಿದ್ದು ಸಮಿತಿ ಮಧ್ಯಂತರ ವರದಿ ನೀಡದರೆ ಇದನ್ನು ಬಜೆಟ್ ನಲ್ಲಿಯೇ ಘೋಷಣೆ ಮಾಡಲಾ ಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇನ್ನೂ ಇದರೊಂದಿಗೆ ಹಳೆ ಪಿಂಚಣಿ ಯೋಜನೆ ಕೂಡಾ ಪ್ರಮುಖವಾಗಿದ್ದು ಇದನ್ನು ಕೂಡಾ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡುತ್ತ ದೆಯಾ ಎಂಬ ನಿರೀಕ್ಷೆಯನ್ನು ಹೊಸ ಪಿಂಚಣಿ ನೌಕರರು ಇಟ್ಟುಕೊಂಡಿದ್ದು ಏನೇನಾಗುತ್ತದೆ ಎಂಬೊದನ್ನು ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..