ಸೂರತ್ –
ಧಾರವಾಡದಲ್ಲಿ ನಡೆದ ಭೀಕರ ಅಪಘಾತದ ಬೆನ್ನಲ್ಲೇ ಗುಜರಾತ್’ನ ಸೂರತ್ ನಗರದ ಕೊಸಂಬಾದಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಹೌದು ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ವೊಂದು ಇದ್ದಕ್ಕಿದ್ದಂತೆ ಪಾದಚಾರಿ ಮಾರ್ಗಕ್ಕೆ ನುಗ್ಗಿದೆ. ಪರಿಣಾಮ ಘಟನೆಯಲ್ಲಿ 14 ಮಂದಿ ಕಾರ್ಮಿಕರು ದುರ್ಮರಣವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ್ದ ಟ್ರಕ್ ಇದ್ದಕ್ಕಿದ್ದಂತೆ ಪಾದಚಾರಿ ಮಾರ್ಗಕ್ಕೆ ನುಗ್ಗಿದೆ.ಪಾದಚಾರಿ ಮಾರ್ಗದಲ್ಲಿ ಕಾರ್ಮಿಕರು ಮಲಗಿದ್ದರೆಂದು ಹೇಳಲಾಗುತ್ತಿದೆ.ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸಾವನ್ನಪ್ಪಿದ್ದ ಎಲ್ಲರೂ ಕಾರ್ಮಿಕರಾಗಿದ್ದು, ರಾಜಸ್ಥಾನ ಮೂಲದವರಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ
ದುರ್ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸೂರತ್ ಟ್ರಕ್ ಅಪಘಾತದಲ್ಲಿ ಹಲವು ಜನರು ಸಾವನ್ನಪ್ಪಿರುವುದು ದುರಂತ. ಮೃತರ ಎಲ್ಲಾ ಕುಟುಂಬಸ್ಥರ ಕುರಿತು ತೀವ್ರ ಸಂತಾಪವನ್ನು ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದು ಮೃತ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ನೀಡಲು ಸೂಚನೆ ನೀಡಿದ್ದಾರೆ.