ನವದೆಹಲಿ –
ಶಿವಲಿಂಗದ ಕುರಿತಂತೆ ವಿವಾದಾತ್ಮಕ ಪೋಸ್ಟ್ ನ್ನು ಮಾಡಿ ದ್ದಕ್ಕಾಗಿ ಪ್ರಾಧ್ಯಾಪಕರೊಬ್ಬರನ್ನು ಬಂಧನ ಮಾಡಿರುವ ಘಟನೆ ನವದೆಹಲಿ ಯಲ್ಲಿ ನಡೆದಿದೆ.ಹೌದು ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ಶಿವಲಿಂ ಗದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ಪೊಲೀಸರು ಬಂಧಿಸಲಾಗಿದೆ

ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸಿದ ಹಿನ್ನಲೆ ಯಲ್ಲಿ ದೆಹಲಿ ಉತ್ತರ ಸೈಬರ್ ಪೊಲೀಸ್ ಠಾಣೆ ಪೊಲೀ ಸರು ರತನ್ ಲಾಲ್ ಅವರನ್ನು ಬಂಧಿಸಿದ್ದಾರೆ. ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ನೀಡಿದ ದೂರಿನ ಆಧಾರದ ಮೇಲೆ ರಾತ್ರಿ ರತನ್ ಲಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು ಸಧ್ಯ ವಶಕ್ಕೆ ತಗೆದುಕೊಂ ಡಿರುವ ಪೊಲೀಸರು ಮುಂದಿನ ಕ್ರಮಗಳನ್ನು ಕೈಗೊಂಡಿ ದ್ದಾರೆ.