ಬೆಂಗಳೂರು –
ನಾಳೆಯಿಂದ ವಿಧಾನ ಮಂಡಳ ಅಧಿವೇಶನ ನಡೆಯಲಿದೆ. ಸಂಪುಟ ವಿಸ್ತರಣೆ, ಖಾತೆಗಳ ಮರು ಹಂಚಿಕೆ ಕಸರತ್ತು ಮುಗಿದ ಬೆನ್ನಲ್ಲೇ, ನಾಳೆಯಿಂದ ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ. ನಾಳೆಯಿಂದ ಆರಂಭಗೊಂಡು, ಫೆಬ್ರವರಿ 5ರವರೆಗೆ ಅಧಿವೇಶನ ನಡೆಯಲಿದೆ.
ನಾಳೆ ಯಿಂದ ಆರಂಭಗೊಳ್ಳಲಿರುವ ಈ ಒಂದು ವಿಧಾನಮಂಡಲದ ಅಧಿವೇಶನದ ಮೊದಲ ದಿನ, ಜಂಟಿ ಸದನಗಳನ್ನು ಉದ್ದೇಶಿಸಿ, ರಾಜ್ಯಪಾಲ ವಜುಭಾಯಿ ವಾಲಾ ಮಾತನಾಡಲಿದ್ದಾರೆ. ಕೋವಿಡ್ ನಿರ್ವಹಣೆಯ ಜೊತೆಗೆ, ರಾಜ್ಯ ಸರ್ಕಾರದ ಅಭಿವೃದ್ಧಿಯ ವಿಷಯವನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಲಿದ್ದಾರೆ. ಇನ್ನೂ ವಿಧಾನ ಮಂಡಲದ ಅಧಿಶೇಶನದ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತ-ಮುತ್ತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ವಿಧಾನಸೌಧದ ಸುತ್ತ ಫೆಬ್ರವರಿ 5 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂಬುದಾಗಿ ತಿಳಿಸಿದ್ದಾರೆ.