ದೆಹಲಿ –
ದೇಶದಲ್ಲಿ ವಾಯುಮಾಲಿನ್ಯ ತಡೆಗಾಗಿ ಹಳೆಯ ವಾಹನಗಳ ಬಳಕೆಯನ್ನು ನಿಷೇಧಿಸುವ ಪ್ರಸ್ತಾಪವನ್ನು ಕೇಂದ್ರ ವಿತ್ತೆ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 2021-21ನೇ ಸಾಲಿನ ಬಜೆಟ್ ನಲ್ಲಿ ಮಂಡಿಸಿದ್ದಾರೆ.

ಸೋಮವಾರ ಕೇಂದ್ರ ಬಜೆಟ್ ಮಂಡಿಸಿದ ಸಚಿವೆ, ದೇಶದಲ್ಲಿ 15 ವರ್ಷ ಮೇಲ್ಪಟ್ಟ ವಾಹನಗಳು ಹಾಗೂ 20 ವರ್ಷ ಮೇಲ್ಪಟ್ಟ ವೈಯಕ್ತಿಕ ಬಳಕೆಯ ವಾಹನಗಳನ್ನು ರದ್ದುಗೊಳಿಸಲಾಗುವುದು ಎಂದು ಘೋಷಿಸಿದರು.

ಹಳೆಯ ವಾಹನಗಳನ್ನು ರದ್ದುಪಡಿಸುವ ಪ್ರಸ್ತಾಪಕ್ಕೆ ಈಗಾಗಲೇ ಭಾರೀ ವಿರೋಧ ವ್ಯಕ್ತವಾಗಿತ್ತು. ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ದೆಹಲಿಯಲ್ಲಿ ಹಳೆಯ ವಾಹನ ರದ್ದುಪಡಿಸಲು ಸಾಧ್ಯವಾಗಿರಲಿಲ್ಲ ಈಗ ಮತ್ತೆ ಇದನ್ನು ಪ್ರಸ್ತಾಪ ಮಾಡಿದ್ದಾರೆ

ಇವೆಲ್ಲದರ ನಡುವೆ ಈಗ ಕೇಂದ್ರ ಸಚಿವರು ಬಜೆಟ್ ನಲ್ಲಿ ಘೋಷಣೆ ಮಾಡಿ ಅಚ್ಚರಿಯನ್ನುಂಟು ಮಾಡಿದ್ದಾರೆ.