ಪಾಲ್ಗಾರ್ –
16 ವರ್ಷದ ಅಪ್ರಾಪ್ತ ಬಾಲಕಿಯನ್ನು ಬಲವಂತ ವಾಗಿ ವೇಶ್ಯಾವಾಟಿಕೆ ದಂಧೆಗೆ ಕಳಿಸಲು ಯತ್ನಿಸಿದ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪಾಲ್ಗಾರ್ ವಲಿವ್ ಪ್ರದೇಶದ ಬಾರ್ ವೊಂದರಲ್ಲಿ ಕೆಲಸ ಮಾಡುತ್ತಿರುವ ಮಹಿಳೆ 16 ವರ್ಷದ ಯುವ. ತಿಯನ್ನು ನಾಲ್ಕು ಲಕ್ಷ ರೂ.ಗಳಿಗೆ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂದು ಸರ್ಕಾರೇತರ ಸಂಸ್ಥೆಯೊಂದು ನೀಡಿದ ದೂರನ್ನು ಆಧರಿಸಿ ಕಾರ್ಯಚರಣೆ ನಡೆಸಿದ್ದರು.
ಮಹಿಳೆ ವಾಸೈ ಪ್ರದೇಶಕ್ಕೆ ಯುವತಿಯ ಮಾರಾಟದ ಬಗ್ಗೆ ಡೀಲ್ ನಡೆಸುತ್ತಾಳೆ ಎಂಬ ಸುಳಿವನ್ನಾಧರಿಸಿ ಪೊಲೀಸರು ಸಿನಿಮಿಯ ರೀತಿಯಲ್ಲಿ ಆಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಿಳೆಯ ವಶದಲ್ಲಿದ್ದ 16 ವರ್ಷದ ಯುವತಿ ಯನ್ನು ರಕ್ಷಿಸಿ ಅವರ ಪೋಷಕರಿಗೆ ಒಪ್ಪಿಸಲಾಗಿದ್ದು, ಮಹಿಳೆ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸ ಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು ಸಧ್ಯ ದೂರನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ