ಧಾರವಾಡ –
ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರಕ್ಕೆ ಧಾರವಾಡದಲ್ಲೂ ಖಂಡನೆ ವ್ಯಕ್ತವಾಗಿದೆ. ಘಟನೆಯನ್ನು ಖಂಡಿಸಿ ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಘಟನೆಯನ್ನು ಖಂಡಿಸಿದರು.ಕಾಲೇಜು ವಿದ್ಯಾರ್ಥಿನಿಯರಿಂದ ಈ ಒಂದು ಪ್ರತಿಭಟನೆ ನಡೆಯಿತು.ಎಐಡಿಎವೈಒ ಸಂಘಟನೆ ನೇತೃತ್ವದಲ್ಲಿ ಈ ಒಂದು ಪ್ರತಿಭಟನೆಯನ್ನು ಮಾಡಲಾಯಿತು.

ಇದೇ ವೇಳೆ ಅತ್ಯಾಚಾರಿಗಳನ್ನ ಕೂಡಲೇ ಬಂಧಿಸಿ ವಂತೆ ಆಗ್ರಹವನ್ನು ಮಾಡಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ದೂರನ್ನು ನೀಡಲಾಯಿತು.