ಸಾಗರ –
ಕಳೆದ ಎರಡು ದಿನಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಪ್ರಭಾವತಿ ಬ್ರಾಹ್ಮಣ ಮಂಚಾಲೆ ರವರು ಎಂದಿನಂತೆ ಬೆಳಿಗ್ಗೆ ಶಾಲೆಗೆ ತೆರಳುತ್ತಿರುವ ಸಂದರ್ಭದಲ್ಲಿ ಮಾರ್ಗ ಮದ್ಯದಲ್ಲಿ ಅವರನ್ನು ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಅಡ್ಡಗಟ್ಟಿ ಹಲ್ಲೆ ಮಾಡಿ ಕೊರಳಲ್ಲಿದ್ದ 50 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಅಪಹರಣ ಮಾಡಿದ್ದಾರೆ.ಈ ಸುದ್ದಿ ತಿಳಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಸಾಗರ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಶಿಕ್ಷಕಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಶಿಕ್ಷಕಿಯರ ಸಮಸ್ಯೆಗಳು ಹಾಗೂ ಸುರಕ್ಷಣೆಗಾಗಿ ಹೆಚ್ಚು ಗಮನ ಹರಿಸಲು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ ಹಾಗೂ ಇಂತಹ ಘಟನೆಗಳು ಮರುಕಳಿಸ ದಂತೆ ಆರಕ್ಷಕ ಠಾಣಾಧಿಕಾರಿಗಳನ್ನೂ ಸಹ ಬೇಟಿ ಮಾಡಿ ಕೂಡಲೇ ಆರೋಪಿಯನ್ನು ಪತ್ತೆಮಾಡಿ ಬಂಧಿಸಬೇಕು ಹಾಗೂ ಅವನಿಂದ ಕದ್ದ ಚಿನ್ನದ ಸರವನ್ನು ವಾಪಸ್ ಕೊಡಿಸಿಕೊಡುವಂತೆ ಮನವಿ ನೀಡಿದ್ದಾರೆ.ಸಾಗರ ತಾಲ್ಲೂಕು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಈ ಸೇವಾ ಕಾರ್ಯವನ್ನು ಎಲ್ಲರೂ ಪ್ರಶಂಸಿ ದ್ದಾರೆ.ಅಲ್ಲಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನಡೆಯ ನ್ನು ಶ್ಲಾಘಿಸಿ ರಾಜ್ಯಘಟಕವು ಅಭಿನಂದನೆ ಸಲ್ಲಿಸಿದೆ.