This is the title of the web page
This is the title of the web page

Live Stream

[ytplayer id=’1198′]

March 2024
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

RTE ಅಡಿಯಲ್ಲಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಬಹುಮುಖ್ಯ ಮಾಹಿತಿ – ಪ್ರವೇಶಕ್ಕೆ ಪ್ರಕಟಗೊಂಡಿತು ತಾತ್ಕಾಲಿಕ ವೇಳಾಪಟ್ಟಿ…..

WhatsApp Group Join Now
Telegram Group Join Now

ಬೆಂಗಳೂರು

RTE ಅಡಿಯಲ್ಲಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಬಹುಮುಖ್ಯ ಮಾಹಿತಿ – ಪ್ರವೇಶಕ್ಕೆ ಪ್ರಕಟಗೊಂಡಿತು ತಾತ್ಕಾಲಿಕ ವೇಳಾಪಟ್ಟಿ ಹೌದು

RTE ವ್ಯಾಪ್ತಿಯಲ್ಲಿ ಮಕ್ಕಳನ್ನು ಶಾಲೆಗೆ ಸೇರಿಸುವ ಕುರಿತಂತೆ ತಾತ್ಕಾಲಿಕ ವೇಳಾಪಟ್ಟಿಯನ್ನುಬಿಡಗಡೆ ಮಾಡಲಾಗಿದೆ.ಹೌದು ಶಿಕ್ಷಣ ಹಕ್ಕು ಕಾಯ್ದೆ (ಆರ್.ಟಿ.ಇ.)ಯಡಿ 2024 -25 ನೇ ಸಾಲಿನ ದಾಖಲಾತಿ,ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಫೆಬ್ರವರಿ 7ರಂದು ಆರ್.ಟಿ.ಇ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಪ್ರಕಟ ಮಾಡಲಾಗಿದೆ. ಫೆಬ್ರವರಿ 23 ರಂದು ಶಾಲೆಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸುವುದು, ಫೆಬ್ರವರಿ 28ರಂದು ನೆರೆಹೊರೆ ಶಾಲೆಗಳ ಬಗ್ಗೆ ಆಕ್ಷೇಪಣೆ ಸಲ್ಲಿಕೆಗೆ ಕೊನೆಯ ದಿನವಾಗಿದೆ.ಮಾರ್ಚ್ 4ರಂದು ಶೇಕಡ 25ರಷ್ಟು ಸೀಟುಗಳು ಲಭ್ಯ ವಿರುವ ಶಾಲೆಗಳ ಪಟ್ಟಿಯನ್ನು ಜಿಲ್ಲೆಯ ಅಧಿಕೃತ ವೆಬ್ ಸೈಟ್ ಮತ್ತು ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸುವುದು.

ಮಾರ್ಚ್ 20, 21ರಂದು ಪ್ರಾಯೋಗಿಕವಾಗಿ ಅರ್ಜಿ ಸಲ್ಲಿಕೆ ಆರಂಭ ಮಾರ್ಚ್ 22 ರಿಂದ ಏಪ್ರಿಲ್ 22ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ, ಏ. 30 ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಈ ಕುರಿತಾಗಿ ಸೂಚನೆ ನೀಡಲಾಗಿದೆ.

ಶಿಕ್ಷಣ ಹಕ್ಕು ಕಾಯ್ದೆಯಡಿ 2024 -25 ನೇ ಸಾಲಿನ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಲೆಗಳ ಮ್ಯಾಪಿಂಗ್ ಮಾಡಲು ಡಿಡಿಪಿಐ ಮತ್ತು ಬಿಇಒಗಳಿಗೆ ತಿಳಿಸಲಾಗಿದೆ.ರಾಜ್ಯದ ಸರ್ಕಾರಿ, ಬಿಬಿಎಂಪಿ,ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮ್ಯಾಪಿಂಗ್ ಮಾಡುವುದು.

ಅಲ್ಪಸಂಖ್ಯಾತ ಶಾಲೆಗಳೆಂದು ಘೋಷಣಾ ಪತ್ರ ಪಡೆದಿರುವ,ಈಗಾಗಲೇ ಮುಚ್ಚಿದ ಮತ್ತು ಕೋರ್ಟ್ ತಡೆಯಾಜ್ಞೆ ಪಡೆದ ಶಾಲೆಗಳನ್ನು ಪಟ್ಟಿಯಿಂದ ಕೈಬಿಡಬೇಕು.ಎಲ್.ಕೆ.ಜಿ.ಯುಕೆಜಿ ತರಗತಿಗಳನ್ನು ಮಾತ್ರ ನಡೆಸುವ ಶಾಲೆಗಳನ್ನು ಪಟ್ಟಿಯಲ್ಲಿ ಸೇರ್ಪಡೆ ಮಾಡಬಾರದು ಎಂದು ಹೇಳಲಾಗಿದೆ.

2023ರ ಡಿಸೆಂಬರ್ 31 ರಲ್ಲಿದ್ದ ದಾಖಲಾತಿ ಸಂಖ್ಯೆ ಆಧರಿಸಿ ಶೇಕಡ 25ರಷ್ಟು ಸೀಟು ಹಂಚಿಕೆ ಪರಿಗಣಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.ನೆರೆಹೊರೆ ಶಾಲೆಗಳಿಗೆ ಸಂಬಂಧಿಸಿ ದಂತೆ ನಿಗದಿತ ಅವಧಿಯಲ್ಲಿ ಆಕ್ಷೇಪಣೆ ಸ್ವೀಕರಿಸಿ ಪರಿಶೀಲಿಸಿ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲು ಬಿಇಒಗಳಿಗೆ ತಿಳಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk