ಹಾಸನ –
ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ದಿಂದ ಸಬ್ ಇನ್ಸ್ಪಕ್ಟರ್ ರೊಬ್ಬರು ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ.ಹೌದು ಮಾದನಾಯಕ್ (52) ಮೃತ ಪಟ್ಟಿ ಅಧಿಕಾರಿಯಾಗಿದ್ದಾರೆ.
ಹಾಸನ ನಗರಠಾಣೆ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಆಗಿದ್ದ ಮಾದನಾಯಕ್ ಪ್ರಕರಣವೊಂದರ ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಿ ನಂತರ ಜೈಲಿಗೆ ಬಿಟ್ಟು ಮನೆಗೆ ತೆರಳಿದ್ದರು.ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಬ್ ಇನ್ಸ್ಪೆಕ್ಟರ್ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.