ಬೆಂಗಳೂರು –
ಪಿಎಸ್ ಐ ಪರೀಕ್ಷಾ ಹಗರಣದಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರೊಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧನ ಮಾಡಿದ್ದಾರೆ.ಹೌದು ಪೊಲೀಸ್ ಸಬ್ ಇನ್ ಸಕ್ಟರ್ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಆಗಿದ್ದ ನವೀನ್ ಎಂಬುವರನ್ನು ಬಂಧಿಸಲಾಗಿದೆ.ಅಕ್ರಮ ಪ್ರಕರಣದಲ್ಲಿ ನವೀನ್ ಪಾತ್ರಕ್ಕೆ ಸಂಬಂಧಿಸಿದಂತೆ ತನಿಖಾ ತಂಡಕ್ಕೆ ದಾಖ ಲೆಗಳು ಲಭಿಸಿದ ಬಳಿಕ ನಾಪತ್ತೆಯಾಗಿದ್ದರು.
ಕಳೆದ ಮೇ ತಿಂಗಳಿಂದ ನವೀನ್‌ಗಾಗಿ ಸಿಐಡಿ ತಂಡವು ಹುಡುಕಾಟ ನಡೆಸುತ್ತಿದ್ದರು ಪದೇ ಪದೇ ಫೋನ್ ನಂಬರ್ ಬದಲಾವಣೆ ಮಾಡುತ್ತಿದ್ದ ಕಾರಣಕ್ಕೆ ಬಂಧನ ಸಾಧ್ಯವಾಗಿರಲಿಲ್ಲ. ನಂದಿನಿ ಲೇಔಟ್‌ನ ಮನೆಯೊಂದರಲ್ಲಿ ಬಂಧಿಸಲಾಗಿದೆ. ಈತ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಎಂಬ ಆರೋಪ ಕೇಳಿ ಬಂದಿದೆ.
ಸಿಐಡಿ ಡಿವೈಎಸ್ಪಿ ಅಂಜುಮಾಲಾ ಟಿ.ನಾಯಕ್ ಪತ್ತೆದಳದ ವಿಭಾಗದ ಸಬ್‌ಇನ್‌ಸ್ಪೆಕ್ಟರ್‌ಗಳಾದ ಅಭಿಜಿತ್ ಆದಿತ್ಯ ಹಾಗೂ ಶ್ರೀಕಾಂತ್ ನೇತೃತ್ವದ ತಂಡವು ಆರೋಪಿಯನ್ನು ಬಂಧಿಸಿದ್ದು ಮುಂದಿನ ಕಾರ್ಯವನ್ನು ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..