ಬೆಂಗಳೂರು –
ಹೌದು ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಮತ್ತು ಟೀಮ್ ನನ್ನು ಕೊನೆಗೂ ಬಂಧನ ಮಾಡಲಾಗಿದೆ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ಪೊಲೀಸರು 18 ದಿನಗಳ ನಂತರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸಿಐಡಿ ಎಸ್ಪಿ ರಾಘ ವೇಂದ್ರ ಹೆಗಡೆ ನೇತೃತ್ವದ ತಂಡವು ದಿವ್ಯಾ ಹಾಗರಗಿ ಅನ್ನು ಬಂಧಿಸಿದ್ದು ಪುಣೆಯಿಂದ ಕಲಬುರಗಿಗೆ ಅವರನ್ನು ಕರೆದು ಕೊಂಡು ಬರಲಾಗುವುದು ಎಂದರು.

ಕಲಬುರಗಿ ಬಿಜೆಪಿ ನಾಯಕರಿಗೆ ದಿವ್ಯಾ ಹಾಗರಗಿಯವರ ಜ್ಞಾನಜ್ಯೋತಿ ಶಾಲೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ವೇಳೆ ಗೊತ್ತಾಗಿತ್ತು.ಅಂದಿನಿಂದ ತಲೆ ಮರೆಸಿಕೊಂ ಡಿದ್ದ ಆರೋಪಿಯನ್ನು ಸಿಐಡಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.ಕಳೆದ 18 ದಿನಗಳಿಂದ ದಿವ್ಯಾ ಹಾಗರಗಿ ಮತ್ತು ಇತರರು ನಾಪತ್ತೆಯಾಗಿದ್ದರು.ಇನ್ನೂ ಈ ಒಂದು ತನಿಖೆಗೆ ಅಸಹಕಾರ ತೋರಿದ ಹಿನ್ನೆಲೆ ರಾಜೇಶ್ ಹಾಗರಗಿ ಅನ್ನು ಬಂಧಿಸಿದ್ದರು.ಆದರೆ ಕಳೆದ 18 ದಿನಗಳಿಂದ ದಿವ್ಯಾ ಹಾಗರಗಿ ಮಾತ್ರ ಪೊಲೀಸರಿಂದ ತಪ್ಪಿಸಿಕೊಂಡಿದ್ದರು.


ಕಳೆದ 23ರಂದು ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಆರ್ ಡಿ ಪಾಟೀಲ್ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದರು.ಸಹೋದರ ಮಹಾಂ ತೇಶ್ ಪಾಟೀಲ್ ಅನ್ನು ಪೊಲೀಸರು ಬಂಧಿಸಿದ್ದರು. ಈತ ನಿಗೆ ಕಾಲ್ ಮಾಡಿದ ಆರ್ ಡಿ ಪಾಟೀಲ್ ಮೊಬೈಲ್ ಲೋಕೇಶನ್ ಅನ್ನು ಸಿಐಡಿ ಅಧಿಕಾರಿಗಳು ಪತ್ತೆ ಮಾಡಿ ದ್ದರು.ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಆರ್ ಡಿ ಪಾಟೀಲ್ ಅನ್ನು ಬಂಧಿಸಲಾಗಿತ್ತು.
ಪಿಎಸ್‌ಐ ನೇಮಕಾತಿ ಪರೀಕ್ಷೆ ಸಂದರ್ಭದಲ್ಲಿ ಶಾಲಾ ಸಿಬ್ಬಂದಿ ಮೇಲೆ ದಿವ್ಯಾ ಹಾಗರಗಿ ಒತ್ತಡ ಹೇರಿದ್ದರು ಎಂದು ಆರೋಪಿಸಲಾಗಿದೆ.ಪರೀಕ್ಷೆಗಳು ಮುಗಿದ ನಂತರ ಓಎಂಆರ್ ಶೀಟ್ ನಲ್ಲಿ ಖಾಲಿ ಬಿಟ್ಟಿರುವ ಪ್ರಶ್ನೆಗಳಿಗೆ ಉತ್ತರ ಬರೆಸಿದ್ದಾರೆ ಎಂಬೊದನ್ನು ಪತ್ತೆ ಮಾಡಿದ್ದು.ಇದೇ ಕೇಂದ್ರದಲ್ಲಿ ಪರೀಕ್ಷೆ ಬರೆದಿರುವ 10 ಮಂದಿ ಈಗಾಗಲೇ ಪಿಎಸ್‌ಐ ಆಗಿ ನೇಮಕಗೊಂಡಿದ್ದು ಹತ್ತೂ ಮಂದಿ ಅಕ್ರಮ ವಾಗಿ ಪರೀಕ್ಷೆಯಲ್ಲಿ ಪಾಸ್ ಆಗಿರುವ ಆರೋಪ ಕೇಳಿ ಬಂದಿದೆ.ಈ ಹಿನ್ನೆಲೆ ಈಗಾಗಲೇ ನಾಲ್ವರು ಅಭ್ಯರ್ಥಿಗಳು ಹಾಗೂ ಮೂವರು ಕೊಠಡಿ ಮೇಲ್ವಿಚಾರಕರನ್ನು ಬಂಧಿಸ ಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಕಳೆದ 2021ರ ಆಗಸ್ಟ್ 3ರಂದು ರಾಜ್ಯಾದ್ಯಂತ ಪಿಎಸ್‌ಐ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು.2022 ಜನವರಿ 19ರಂದು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು.ಆದರೆ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಅಭ್ಯರ್ಥಿಗಳು ದೂರು ಸಲ್ಲಿಸಿದ ಹಿನ್ನೆಲೆ ಗೃಹ ಇಲಾಖೆಯು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.