ಬೆಂಗಳೂರು –
ರಾಜ್ಯದಲ್ಲಿ ಕೊರೊನಾ ಸೊಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಇನ್ನೂ ರಾಜ್ಯ ರಾಜಧಾನಿ ಬೆಂಗಳೂರಿ ನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳ ವಾಗುತ್ತಿದ್ದು ಇನ್ನೂ ಇತ್ತ ಕೊರೋನಾ ನಿಯಂತ್ರಣ ತಡೆಗಾಗಿ ಇದೀಗ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದ ರ್ಶಿ ಸುತ್ತೋಲೆ ಹೊರಡಿಸಿದ್ದು, ಕೊರೋನಾ ವೈರಸ್ 2ನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ, ಪ್ರತಿಯೊಂದು ಹಂತದಲ್ಲಿಯೂ ಸಹ ಸೋಂಕು ಹರ ಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇರುತ್ತದೆ ಎಂದಿದ್ದಾರೆ

ಸಚಿವರುಗಳ ಕಚೇರಿ ಮತ್ತು ಸಚಿವಾಲಯದ ಬಹುತೇಕ ಕಚೇರಿಗಳಲ್ಲಿ ದಿನನಿತ್ಯ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವ ಕಾರಣದಿಂದಾಗಿ ಸಚಿವಾಲಯದ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರ ಆರೋಗ್ಯ ಮತ್ತು ಆಡಳಿತದ ಹಿತದೃಷ್ಠಿಯಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಯಂತ್ರಿಸುವ ಅನಿವಾರ್ಯತೆ ಇದೆ ಎಂದಿದ್ದಾರೆ

ಆದುದರಿಂದ ಸದರಿ ಕಟ್ಟಡಗಳಿಗೆ ಮುಖ್ಯಮಂತ್ರಿ ಯವರ ಸಚಿವಾಲಯ, ಸಚಿವರು ಹಾಗೂ ಸಚಿವಾ ಲಯ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿ ಸಲಾದ ಭೇಟಿಯನ್ನು ಹೊರತುಪಡಿಸಿ, ಸಾಮಾನ್ಯ ಭೇಟಿಗೆ ಸಾರ್ವಜನಿಕರ ಪ್ರವೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿರ್ಬಂಧಿಸಿ ಆದೇಶಿಸಿದ್ದಾರೆ.

ಇನ್ನೂ ಸಚಿವರು, ಅಧಿಕಾರಿಗಳನ್ನು ಭೇಟಿ ಮಾಡಲು ಸಂಪರ್ಕಿಸಲು ನಿರ್ಧಿಷ್ಟ ಉದ್ದೇಶವನ್ನು ಹೊಂದಿ, ಮುಖ್ಯಮಂತ್ರಿಯವರ ಸಚಿವಾಲಯ, ಸಚಿವರು ಹಾಗೂ ಸಚಿವಾಲಯದ ಇಲಾಖೆಗಳ ಹಿರಿಯ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆದಿರುವ ಸಾರ್ವಜನಿಕರಿಗೆ ಮಾತ್ರ ಪೂರ್ವಾನು ಮತಿ ಪತ್ರಗಳನ್ನು ಪರಿಶೀಲಿಸಿ, ಮಧ್ಯಾಹ್ನ 3.30 ಗಂಟೆಯ ನಂತ್ರವಷ್ಟೇ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಮಿತಿಗೊಳಿಸ ಲಾದ ಪ್ರವೇಶವನ್ನು ಕಲ್ಪಿಸಲು ಅವಕಾಶ ಮಾಡಿಕೊಡಲಾಗಿದೆ