ಬೆಂಗಳೂರು –
ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀ ಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋ ಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಹೆಚ್ಚುತ್ತಿರುವ ಕೊವಿಡ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿ ಯಿಂದ ಈ ಒಂದು ನಿರ್ಧಾರವನ್ನು ತೆಗೆದುಕೊಳ್ಳಲಾ ಗಿದ್ದು ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ

ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಜನಪ್ರತಿನಿಧಿ ಗಳು, ಪೋಷಕರು ಮತ್ತು ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿ ಈ ಒಂದು ತೀರ್ಮಾನ ತೆಗೆದುಕೊಳ್ಳಲಾಗಿದೆ.

ವಿದ್ಯಾರ್ಥಿಗಳ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರ ತೆಯಿಂದ ವಾರ್ಷಿಕ ಪರೀಕ್ಷೆ ಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಅವರು ಕಿವಿಮಾತು ಹೇಳಿ ದ್ದಾರೆ
