ಚಿಕ್ಕಬಳ್ಳಾಪುರ –
ಮತ್ತೊಂದು ಸ್ಪೋಟ ನಡೆದ ದುರಂತ ನಡೆದ ಚಿಕ್ಕಬಳ್ಳಾಪೂರ ಜಿಲ್ಲೆಯ ಘಟನಾ ಸ್ಥಳಕ್ಕೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ಮಾಡಿದರು.ದುರಂತ ನಡೆದ ಘಟನಾ ಸ್ಥಳಕ್ಕೇ ಸಚಿವರು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಪಡೆದುಕೊಂಡರು.

ಇದೇ ವೇಳೆ ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಸ್ಪೋಟದ ಘಟನೆಯಿಂದ ಎಚ್ಚೇತ್ತುಕೊಳ್ಳದೇ ಸೂಕ್ತವಾದ ಕ್ರಮವನ್ನು ಕೈಗೊಳ್ಳದೇ ಸುಮ್ಮನಿದ್ದ ಚಿಕ್ಕಬಳ್ಳಾಪೂರ ಜಿಲ್ಲೆಯ ಜಿಲ್ಲಾಧಿಕಾರಿ,ಜಿಲ್ಲಾ ಎಸ್ಪಿ,ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಗೃಹ ಸಚಿವರು ಪುಲ್ ಡ್ರೀಲ್ ಮಾಡಿದರು.

ಘಟನೆ ಬಗ್ಗೆ ಪರಾಮರ್ಶೆ ಮಾಡುತ್ತಾ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.ಅರ್ಧ ಗಂಟೆಯಿಂದ ಸ್ಥಳದಲ್ಲೇ ಪರಿಶೀಲನೆ ನಡೆಸಿದ ಗೃಹ ಸಚಿವರು. ಡಿಸಿ ಆರ್ ಲತಾ. ಎಸ್ಪಿ ಜಿ ಕೆ ಮಿಥುನ್ ಕುಮಾರ್. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ನಂಜುಂಡಸ್ವಾಮಿ ಗೆ ತರಾಟೆ ತಗೆದುಕೊಂಡರು.

ಜಿಲೆಟಿನ್ ಸ್ಪೋಟ ಸಂಭವಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿನ ವಾಸ್ತವ ಪರಿಸ್ಥಿತಿಯನ್ನು ಸಚಿವರು ಖುದ್ದಾಗಿ ಪರಿಶೀಲಿಸಿದರು. ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಘಟನೆ ಕುರಿತು ಹೆಚ್ಚಿನ ಮಾಹಿತಿ ಪಡೆದರು.

ಘಟನೆಗೆ ಕಾರಣಗಳೇನು? ರಾತ್ರಿ ವೇಳೆ ಈ ಅಜಾಗರೂಕತೆ ಸಂಭವಿಸಿದ್ದು ಹೇಗೆ ಎಂಬುದರ ಬಗ್ಗೆ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ಪಡೆದುಕೊಂಡರು. ಈ ದುರ್ಘಟನೆಯಲ್ಲಿ ಮೃತ ಪಟ್ಟವರ ಆತ್ಮಕ್ಕೆ ಸಚಿವರು ನಮನ ಸಲ್ಲಿಸಿದರು.ಗೃಹ ಸಚಿವರೊಂದಿಗೆ ಆರೋಗ್ಯ ಸಚಿವ ಡಾ.ಸುಧಾಕರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.